ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kannada Literary Festival: ಏಲಕ್ಕಿ ನಗರಿಯಲ್ಲಿ ಜರುಗಲಿದೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನ

Vivek Biradar by Vivek Biradar
April 24, 2022
in Newsbeat, State, ರಾಜ್ಯ
Kannada Sahitya Sammelana Saaksha Tv
Share on FacebookShare on TwitterShare on WhatsappShare on Telegram

ಏಲಕ್ಕಿ ನಗರಿಯಲ್ಲಿ ಜರುಗಲಿದೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನ

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನವನ್ನು ಈ ವರ್ಷ ಏಲಕ್ಕಿ ನಗರಿ ಹಾವೇರಿಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ  ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಯಿತು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಿನ್ನೆ (ಶನಿವಾರ) ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು.

ಸಮ್ಮೇಳನದ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಹಾವೇರಿಯಲ್ಲಿ 86 ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ಜರುಗಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ @karkalasunil, ಕಾರ್ಮಿಕ ಸಚಿವ @ShivaramHebbar, ಕೃಷಿ ಸಚಿವ @bcpatilkourava, ಸಂಸದ @shivkumarudasi,
1/2 pic.twitter.com/5PSy6dV1Gs

— CM of Karnataka (@CMofKarnataka) April 23, 2022

ಇನ್ನೂ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆಯಾಗಬೇಕು. ಎಲ್ಲಿ, ಎಷ್ಟು ಜನರಿಗೆ ವಸತಿ ವ್ಯವಸ್ಥೆಯಾಗಿದೆ ಎಂಬ ಬಗ್ಗೆ ನಿಖರವಾಗಿ ಯೋಚಿಸಿ. ಹಾಸ್ಟೆಲ್​ಗಳು ಮತ್ತು ಡಾರ್ಮಿಟರಿಗಳನ್ನು ವಸತಿ ಶಾಲೆಗಳನ್ನು ಸದುಪಯೋಗಿಸಿಕೊಳ್ಳಬೇಕು. ಪ್ರಮುಖ ಕಲ್ಯಾಣ ಮಂಟಪಗಳನ್ನು ಗುರುತಿಸಿ. ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿಯೂ ವಸತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು.

ವಸತಿಗಾಗಿ ಮಾರ್ಗ ಮಧ್ಯೆಯೂ ಉತ್ತಮ ಹೋಟೆಲ್​ಗಳಿವೆ. ಖಾಸಗಿ ಶಾಲೆಗಳನ್ನು ಸಹ ಬಳಕೆ ಮಾಡಿಕೊಳ್ಳಬಹುದು. ತುರ್ತು ಪರಿಸ್ಥಿತಿಗಳಲ್ಲಿ ಬಳಕೆ ಮಾಡಲು ಕುಂಭಮೇಳದಲ್ಲಿ ಆಯೋಜಿಸಿದಂತೆ ಟೆಂಟ್​ಗಳನ್ನು ಉಪಯೋಗಿಸಬಹುದು. ಇವುಗಳ ಬಗ್ಗೆ ಸೂಕ್ತ ನೀಲನಕ್ಷೆ ಸಿದ್ಧಪಡಿಸಲು ತಿಳಿಸಿದ್ದಲ್ಲದೇ, ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯ ಬಗ್ಗೆಯೂ ಸೂಕ್ತ ಯೋಜನೆಗಳನ್ನು ರೂಪಿಸಬೇಕು. ಸಿದ್ಧತೆಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಮತ್ತೊಂದು ಸಭೆ ಕರೆದು, ಅಂತಿಮಗೊಳಿಸಬೇಕು. ಬಜೆಟ್​ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಭಾರಿಯ ಸಮ್ಮೇಳನವನ್ನು ಪರಿಸರಸ್ನೇಹಿಯಾಗಿಸಲು ಫ್ಲೆಕ್ಸ್​ಗಳ ಬಳಕೆಯನ್ನು ನಿಷೇಧಿಸಿ ಜಾಹೀರಾತು ಫಲಕಗಳನ್ನು ಬಳಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು. ಸಭೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಚಂದ್ರಶೇಖರ್ ಕಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಅರುಣ್ ಕುಮಾರ್ ಪೂಜಾರ್, ನೆಹರು ಒಲೆಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹಾವೇರಿ ಜಿಲ್ಲಾಧಿಕಾರಿ ಡಾ. ಸಂಜಯ ಶೆಟ್ಟೆಣ್ಣವರ್ ಇದ್ದರು.

Tags: #Saaksha TV86th All India Kannada Sahitya SammelanaCM Bommaihaveri
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram