ಹಾಸನದಲ್ಲಿ ಇಂದು 89 ಕೊರೊನಾ ಕೇಸ್ ಪತ್ತೆ
ಹಾಸನ : ಹಾಸನ ಜಿಲ್ಲೆಯಲ್ಲಿ ಹೆಮ್ಮಾರಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಇಂದು ಜಿಲ್ಲೆಯಲ್ಲಿ ಹೊಸದಾಗಿ 89 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟಾರೆ ಸಕ್ರಿಯ ಕೊರೊನಾ ಕೇಸ್ ಗಳ ಸಂಖ್ಯೆ 250ಕ್ಕೆ ಏರಿಕೆಯಾಗಿದೆ.
ಇಂದು ಎಂಟು ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.