ಹಾಸನ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 9 ಕೋಟಿ ರೂ.ಗೂ ಅಧಿಕ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹಾಸನ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿರುವ ವುಡ್ ಪೆಕರ್ ಡಿಸ್ಟಿಲರಿಸ್ ಆ್ಯಂಡ್ ಬ್ರಿವರೀಸ್ ಪ್ರೈವೆಟ್ ಲಿ ಕೇಂದ್ರದಲ್ಲಿ ತಪಾಸಣೆ ನಡೆಸಿ 9,54,08,422 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. 56,236 ಬಾಕ್ಸ್‌ಗಳಲ್ಲಿದ್ದ ಬಿಯರ್ ಸೇರಿದಂತೆ ವಿವಿಧ ಕಂಪನಿಯ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ದೂರು ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.