ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು Assam saaksha tv
ಅಸ್ಸೋಂ : ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವ ಘಟನೆ ಅಸ್ಸೋಂನ ಕರೀಂಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಕರೀಂಗಂಜ್ ಜಿಲ್ಲೆಯ ಬೈತಖಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 9 ಮಂದಿ ಮೃತಪಟ್ಟಿದ್ದಾರೆಂದು ಇಲ್ಲಿನ ಪೊಲೀಸರು ತಿಳಿಸಿದ್ದಾರೆ.
ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸಂತ್ರಸ್ತರು ಛಾತ್ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ.









