ಮುಂಬಯಿ: ಬೆಂಕಿ ಹೊತ್ತಿಕೊಂಡಿದೆ ಎಂಬ ಸುಳ್ಳು ಸುದ್ದಿ ನಂಬಿ ಜೀವ ಉಳಿಸಿಕೊಳ್ಳಲು ರೈಲಿನಿಂದ ಹಾರಿದ ಘಟನೆ ನಡೆದಿದೆ. ಈ ಘಟನೆಯಲ್ಲಿ 9 ಜನ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ಜಲಗಾಂವ್‌ನಲ್ಲಿ (Jalgaon) ಈ ಭೀಕರ ಘಟನೆ ನಡೆದಿದೆ. ಕರ್ನಾಟಕ ಎಕ್ಸ್‌ಪ್ರೆಸ್ (Karnataka Express) ರೈಲು ಹರಿದು ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ. ಘಟನೆಯ ಮಾಹಿತಿ ಪಡೆದ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಷ್ಪಕ್ ಎಕ್ಸ್‌ಪ್ರೆಸ್ (Pushpak Express) ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿದೆ. ಈ ಬಿಸಿಗಾಳಿಯನ್ನೇ ಪ್ರಯಾಣಿಕರು ಬೆಂಕಿ ಎಂದು ಭಾವಿಸಿ ಚೈನ್ ಎಳೆದು ನಿಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ಅಪಾಯದಿಂದ ಪಾರಾಗಲು ರೈಲಿನಿಂದ ಕೆಳಕ್ಕೆ ಜಿಗಿದು ಮತ್ತೊಂದು ಹಳಿಗೆ ಹೋಗಿದ್ದಾರೆ. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್ ಬಂದಿದ್ದು ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಹೀಗಾಗಿ ಸಾವನ್ನಪ್ಪಿದ್ದಾರೆ.








