ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾದಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಕೆ ಕಂಡ 90% ಜನರ ಶ್ವಾಸಕೋಶಕ್ಕೆ ಹಾನಿ

admin by admin
August 7, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಚೀನಾದಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಕೆ ಕಂಡ 90% ಜನರ ಶ್ವಾಸಕೋಶಕ್ಕೆ ಹಾನಿ

ವುಹಾನ್, ಅಗಸ್ಟ್ 7: ಚೀನಾದ ವುಹಾನ್ ನಗರದಲ್ಲಿ ಕೋವಿಡ್-19 ನಿಂದ ಚೇತರಿಸಿಕೊಂಡವರಲ್ಲಿ ಕನಿಷ್ಠ 90 ಪ್ರತಿಶತದಷ್ಟು ಜನರ ಶ್ವಾಸಕೋಶಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ. ವುಹಾನ್ ವಿಶ್ವವಿದ್ಯಾಲಯದ ಝೋಗ್ನಾನ್ ಆಸ್ಪತ್ರೆಯ ತಂಡವು ಏಪ್ರಿಲ್‌ನಿಂದ ಚೇತರಿಸಿಕೊಂಡ ರೋಗಿಗಳ ಭೇಟಿಯಾಗುತ್ತಿದೆ . ಒಂದು ವರ್ಷದ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದ್ದು ಸರಾಸರಿ 55 ವರ್ಷ ಪ್ರಾಯದವರನ್ನು ಭೇಟಿಯಾಗಿದೆ.

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಮೊದಲ ಹಂತದ ಫಲಿತಾಂಶಗಳು 90 ಪ್ರತಿಶತದಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ ಎಂದು ಬಹಿರಂಗಪಡಿಸಿದೆ. ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ವರದಿ ಗಳು ತಿಳಿಸಿವೆ.
ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಜಿಯಾಂಗ್ ನೇತೃತ್ವದ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳಿಗೆ ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಲು ಸಾಧ್ಯವಾಯಿತು. ಆದರೆ ಆರೋಗ್ಯವಂತರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದಾಗಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಯಿತು ಎಂದು ಬೀಜಿಂಗ್ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್‌ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಕ್ಸಿಯಾವೊ ವರದಿಯಲ್ಲಿ ಉಲ್ಲೇಖಿಸಿದ್ದಾರೆ. 65 ವರ್ಷಕ್ಕಿಂತ ಮೇಲ್ಪಟ್ಟ ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಮುಂದಿನ ಭೇಟಿಗಳನ್ನು ನಡೆಸುತ್ತಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು ಜನರಲ್ಲಿ ಕೊರೋನವೈರಸ್ ಸೋಂಕಿನ ವಿರುದ್ಧದ ಪ್ರತಿಕಾಯಗಳು ಕಾಣುತ್ತಿಲ್ಲ ಎಂದು ಫಲಿತಾಂಶಗಳು ತೋರಿಸಿಕೊಟ್ಟವು. ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೋವಿಡ್-19 ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ ಋಣಾತ್ಮಕ ಫಲಿತಾಂಶಗಳನ್ನು ಪಡೆದರು ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆದರು. ಆದ್ದರಿಂದ ಅವರನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಸಕಾರಾತ್ಮಕ ಫಲಿತಾಂಶ ಬಂದರೆ ಸಾಮಾನ್ಯವಾಗಿ ಒಬ್ಬ ವ್ಯಕ್ತಿಯು ವೈರಸ್‌ ಸೋಂಕಿಗೆ ಒಳಗಾಗಿದ್ದಾನೆ ಎಂದರ್ಥ.
100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು.
ರೋಗಿಗಳು ಖಿನ್ನತೆ ಮತ್ತು ಅಸ್ಪೃಶ್ಯ ಭಾವನೆಯನ್ನು ಸಹ ಅನುಭವಿಸಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳು ಒಂದೇ ಟೇಬಲ್‌ನಲ್ಲಿ ಅವರೊಂದಿಗೆ ಆಹಾರ ಸೇವನೆ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

Tags: ChinacoronavirusCOVID-19indiakarnatakalatest-newsLungsViralcoronavirusWuhan
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram