ಪಾಟ್ನಾ : ಬಿಹಾರ ರಾಜ್ಯದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕಳೆದ ಎರಡು ದಿನಗಳಿಂದ ಗುಡುಗು ಸಿಡಿಲು ಸಹಿತ ಭಾರಿ ವರ್ಷಧಾರೆ ಆಗುತ್ತಿದೆ. ಏತನ್ಮಧ್ಯೆ ಸಿಡಿಲಿಗೆ ಬಿಹಾರದಲ್ಲಿ 92 ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಗುರುವಾರ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಸಿಡಿಲು ಬಿಡಿದು 92 ಮಂದಿ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗೋಪಾಲ್ ಗಂಜ್ ಜಿಲ್ಲೆಯೊಂದರಲ್ಲಿ ಸಿಡಿಲಿಗೆ 13 ಮಂದಿ ಬಲಿಯಾಗಿದ್ದರೇ, ನವಾಡದಲ್ಲಿ 8 ಮಂದಿ ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಇನ್ನು ಉತ್ತರಪ್ರದೇಶದಲ್ಲಿ ಮಿಂಚು ಬಡಿದು 24 ಮಂದಿ ಸಾವನ್ನಪ್ಪಿದ್ದಾರೆ.
ಒಟ್ಟಾರೆ ಈ ಎರಡು ರಾಜ್ಯಗಳಲ್ಲಿ ಸಿಡಿಲು ಬಡಿದು 116 ಮಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.







