KRS ಡ್ಯಾಂನಿಂದ 97693 ಕ್ಯೂಸೆಕ್ ನೀರು ಬಿಡುಗಡೆ
ಮಂಡ್ಯ : ಕೆ ಆರ್ ಎಸ್ ಜಲಾಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.
ಇದರಿಂದಾಗಿ ಸಾಕಷ್ಟು ಪ್ರಮಾಣದ ನೀರು ಕೆಆರ್ ಎಸ್ ಡ್ಯಾಂಗೆ ಹರಿದು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಡ್ಯಾಂನಿಂದ 97693 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಇದರಿಂದ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.
ಇತ್ತ ನದಿ ಹಂಚಿನ ಜಮೀನುಗಳು ಜಲಾವೃತಗೊಂಡಿವೆ.

ಶ್ರೀರಂಗಪಟ್ಟಣ ವ್ಯಾಪ್ತಿಯ ರಾಂಪುರ ಗ್ರಾಮದ ಜಮೀನು ಹಾಗೂ ಬಹುತೇಕ ಕೃಷಿ ಜಮೀನು ನೀರಿನಲ್ಲಿ ಮುಳುಗಡೆಯಾಗಿದೆ.
ಇದರಿಂದ ಕಟಾವಿಗೆ ಬಂದ ಫಸಲನ್ನು ರಕ್ಷಿಸಿಕೊಳ್ಳಲಾಗದೆ ರೈತರು ಕಂಗಾಲಾಗಿದ್ದಾರೆ.
ಇದು ಮಾತ್ರವಲ್ಲದೇ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಬಳಿ ಜಮೀನು ಜಲಾವೃತಗೊಂಡಿದೆ.
ಕಬ್ಬು, ಅಡಿಕೆ, ತೆಂಗು, ಭತ್ತ ಸೇರಿದಂತೆ ಹಲವು ಬೆಳೆಗಳು ಜಲಾವೃತಗೊಂಡಿದ್ದು, ಅನ್ನದಾತ ಕಂಗಾಲಾಗಿದ್ದಾರೆ.








