`ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ವ್ಯಕ್ತಿ ಅಂದರ್
ಬಳ್ಳಾರಿ : ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪಿಯನ್ನು ಸಿರುಗುಪ್ಪ ಪೊಲೀಸರು ಬಂಧಿಸಿದ್ದಾರೆ.
ಸಿರಗುಪ್ಪ ನಿವಾಸಿ ಹುಸೇನ್ ಎಂಬಾತ ಬಂಧಿತ ವ್ಯಕ್ತಿ. ಈತ ಪಾಕಿಸ್ತಾನ ಧ್ವಜವನ್ನು ಮೈಮೇಲೆ ಹಾಕಿಕೊಂಡು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟಿದ್ದ.
ಅಲ್ಲದೆ ತನ್ನ ವಾಟ್ಸಾಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದ. ಅಲ್ಲದೆ ತನ್ನ ಸ್ನೇಹಿತರಿಗೂ ಆ ವಿಡಿಯೋವನ್ನು ಶೇರ್ ಮಾಡಿದ್ದನಂತೆ.
ಈ ಮಾಹಿತಿಯನ್ನು ತಿಳಿಸಿದ ಸಿರಗುಪ್ಪ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇತ್ತ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಬೇಕು ಪ್ರತಿಭಟನೆ ನಡೆಸಲಾಗಿದೆ.









