ಹು-ಧಾ ಮಹಾನಗರ ಪಾಲಿಕೆ ಚುನಾವಣೆ : ಬೆಲ್ಲದ್ ಮತದಾನ
ಧಾರವಾಡ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಜನರು ಶಾಂತಿಯುತವಾಗಿ ಬಂದು ಹಕ್ಕು ಚಲಾಯಿಸುತ್ತಿದ್ದಾರೆ.
ಇತ್ತ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಬೆಲ್ಲದ್ ಅವರು ಧಾರವಾಡದ ಬುದ್ದರಕ್ಕಿತ ಶಾಲೆಯಲ್ಲಿ ಮತದಾನ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ.ಈ ಬಾರಿ 55 ರಿಂದ 60 ಸೀಟುಗಳನ್ನು ನಾವು ಗೆಲ್ಲುತ್ತೇವೆ. ಪಕ್ಷೇತರ ಅಭ್ಯರ್ಥಿಗಳಿಂದ ಏನೂ ತೊಂದರೆಯಾಗುವುದಿಲ್ಲ ಎಂದರು.