ಬಾಗೇಪಲ್ಲಿ ಕೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ h d kumaraswamy saaksha tv
ಚಿಕ್ಕಬಳ್ಳಾಪುರ : ಮುಂದಿನ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದೆ.
ಈಗಾಗಲೇ ಪಕ್ಷ ಸಂಘಟನೆಯತ್ತ ಗಮನಹರಿಸಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಇದೀಗ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.
ಬಾಗೇಪಲ್ಲಿ ಕ್ಷೇತ್ರದ ಪ್ರಭಾವಿ ಮುಖಂಡರಾಗಿರುವ ಡಿ ಜೆ ನಾಗರಾಜ ರೆಡ್ಡಿ ಜೆಡಿಎಸ್ ಟಿಕೆಟ್ ನೀಡುವುದಾಗಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಇಂದು ಬಾಗೇಪಲ್ಲಿಯ ಜೆಡಿಎಸ್ ಪ್ರಭಾವಿ ಮುಖಂಡ ಹರಿನಾಥ್ ರೆಡ್ಡಿ ಹಾಗೂ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜುನಾಥ್ ಭೇಟಿ ಮಾಡಿದರು.
ಈ ವೇಳೆ ನಾಗರಾಜ್ ರೆಡ್ಡಿ ಅವರಿಗೆ ಟಿಕೆಟ್ ನೀಡುವುದಾಗಿ ಕುಮಾರಸ್ವಾಮಿ ಘೋಷಿಸಿದರು.









