ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಆತ್ಮಹತ್ಯೆ
ತೆಲಂಗಾಣ : ಸೈದಾಬಾದ್ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಪಲ್ಲಂಕೊಂಡ ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ವರದಿಯಾಗಿದೆ.
ಪಲ್ಲಂಕೊಂಡ ರಾಜು ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೆಲಂಗಾಣ ಡಿಜಿಪಿ ಸ್ಪಷ್ಟಪಡಿಸಿದ್ದಾರೆ.
ಸೆಪ್ಟೆಂಬರ್ 9ರಂದು ಸೈದಾಬಾದ್ ನಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ಪರಾರಿಯಾಗಿದ್ದ. ಆತನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದರು.
ಅಲ್ಲದೆ ಪೊಲೀಸರು ಈತನ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು.
ಆದ್ರೆ ಇವತ್ತು ಪಲ್ಲಂಕೊಂಡ ರಾಜು ರೈಲು ಹಳಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ.








