ಪಂಜಾಬ್ ಸಿಎಂ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ Captain Amarinder Singh saaksha tv
ಪಂಜಾಬ್ : ಪಕ್ಷದಲ್ಲಿ ಉದ್ಭವವಾಗಿರುವ ಬಂಡಾಯ ಶಮನಗೊಳಿಸಲಾಗದೇ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
ಇಂದು ಸಂಜೆ ನಡೆಯಲಿದ್ದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅಮರಿಂದರ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿತ್ತು.
ಆದ್ರೆ ಅಮರಿಂದರ್ ಸಿಂಗ್ ಅವರು ಶಾಸಕಾಂಗ ಸಭೆಗೂ ಮುನ್ನವೇ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಅಮರಿಂದರ್ ಸಿಂಗ್ ಅವರ ಮಗ ರಣಿಂದರ್ ಸಿಂಗ್ ಅವರು ತಮ್ಮ ಟ್ವಿಟರ್ ಖಾತೆ ನಲ್ಲಿ ಈ ಸುದ್ದಿಯನ್ನು ದೃಢಪಡಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ಕೆಲ ದಿನಗಳಲ್ಲಿ ಬಂಡಾಯ ಭುಗಿಲೆದ್ದಿತ್ತು. ಅಮರಿಂದರ್ ಸಿಂಗ್ ವಿರುದ್ಧ ಸ್ಥಳೀಯ ಕಾಂಗ್ರೆಸ್ ನಾಯಕರು ಪಕ್ಷದ ವರಿಷ್ಠರಿಗೆ ಸಾಕಷ್ಟು ಬಾರಿ ಪತ್ರ ಬರೆದಿದ್ದರು.









