ವಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ : ಬಿಎಸ್ ವೈ B S Yediyurappa saaksha tv
ದಾವಣಗೆರೆ : ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ. ವಿಪಕ್ಷಗಳನ್ನು ಯಾವುದೇ ಕಾರಣಕ್ಕೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಿತು.
ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಮುಂದಿನ ಚುನಾವಣೆಯಲ್ಲಿ ನಾವು 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಬೇಕಾಗಿದೆ.
ಹೀಗಾಗಿ ನಾವು ಬೂಟ್ ಮಟ್ಟದಿಂದ ಕೆಲಸ ಮಾಡಬೇಕಾಗಿದೆ ಎಂದು ಕರೆಕೊಟ್ಟರು.
ಇದೇ ವೇಳೆ ಯಾವುದೇ ಕಾರಣಕ್ಕೂ ವಿಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಎಂದ ಯಡಿಯೂರಪ್ಪ, ಪ್ರತಿಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆ ಹೆಣೆದಿವೆ.
ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಈಗಾಗಲೇ ಬಿಜೆಪಿಯ ಕೆಲ ನಾಯಕರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದಾರೆ. ಹಾಗಾಗಿ ಯಾರನ್ನೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಹೇಳಿದರು.









