ADVERTISEMENT
Friday, August 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಒಡಂಬಡಿಕೆ

Mahesh M Dhandu by Mahesh M Dhandu
September 23, 2021
in Newsbeat, State, ರಾಜ್ಯ
Agreement saaksha tv
Share on FacebookShare on TwitterShare on WhatsappShare on Telegram

ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಒಡಂಬಡಿಕೆ

ಬೆಂಗಳೂರು : ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಸ್ಮಾರ್ಟ್ ಕೃಷಿ ಕೇಂದ್ರಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಈ ನಿಟ್ಟಿನಲ್ಲಿ ಹೆಕ್ಸಾಗಾನ್ ಮ್ಯಾನ್ಯುಫ್ಯಾಕ್ಚರಿಂಗ್ ಇಂಟಲಿಜೆನ್ಸ್ ಇಂಡಿಯಾ ಕಂಪೆನಿ ಜೊತೆ ಕೃಷಿ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ.

Related posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

August 28, 2026
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

August 28, 2026

ವಿಕಾಸಸೌಧದ ಸಭಾಂಗಣದಲ್ಲಿ ಹೆಕ್ಸಗಾನ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್ ಧರ್ಮರಾಜನ್ ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಕೃಷಿ ಅಭಿವೃದ್ಧಿಯಲ್ಲಿ ಕರ್ನಾಟಕ ಮಹತ್ವದ ಹೆಜ್ಜೆಇಟ್ಟಿದ್ದು, ದೇಶದಲ್ಲಿಯೇ ಮೊದಲ ಸ್ಥಾನವನ್ನು ಪಡೆದಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿರುವ ರೈತರ ಆದಾಯವನ್ನು ದ್ವಿಗುಣಗೊಳಿಸುವ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರವು ಈ ಮಹತ್ವದ ಒಡಂಬಡಿಕೆಯನ್ನು ಮಾಡಿಕೊಂಡಿದೆ.

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮಯದಲ್ಲಿ ಹೆಕ್ಸಾನ್ ಕಂಪೆನಿ ಜೊತೆ ಚರ್ಚಿಸಿ ಈ ಒಡಂಬಡಿಕೆಗೆ ಮುಂದಾಗಿದ್ದೆವು. ಸಿಎಂ ಮಾರ್ಗದರ್ಶನದಂತೆ ಹಣಕಾಸು ಇಲಾಖೆಯಿಂದ ಒಪ್ಪಿಗೆಯನ್ನು ಇದಕ್ಕೆ ಪಡೆದು ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಸರ್ಕಾರ ಎರಡನೇ ಹೆಜ್ಜೆ ಹೆಜ್ಜೆ ಇಟ್ಟಿದೆ.

ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ 700 ಕೋಟಿ ರೂ.ಮೌಲ್ಯದ ಒಡಂಬಡಿಕೆಯಾಗಿದ್ದು, ಈ ಒಡಂಬಡಿಕೆಯ ಮೂಲಕ ರಾಜ್ಯದ 4 ಕೃಷಿ ವಿಶ್ವವಿದ್ಯಾಲಯಗಳಲ್ಲಿ 7 CIDSA ಕೇಂದ್ರಗಳನ್ನು ಬೆಂಗಳೂರು, ಚಾಮರಾಜನಗರ, ಶಿವಮೊಗ್ಗ, ಧಾರವಾಡ, ವಿಜಯಪುರ, ಹನುಮನಮಟ್ಟಿ ಹಾಗೂ ಗಂಗಾವತಿಯಲ್ಲಿ ಸ್ಮಾರ್ಟ್ ಕೃಷಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು.

Agreement saaksha tv

ಏನಿದು ಒಡಂಬಡಿಕೆ: ಕೃಷಿ ವಿಶ್ವವಿದ್ಯಾಲಯಗಳಲ್ಲಿ ಹೇಗೆ ಹೆಕ್ಸಗಾನ್ ನೆರವಾಗಲಿದೆ:

CIDSA ಕೇಂದ್ರಗಳು 3 ವರ್ಷಗಳ ಅವಧಿಯಲ್ಲಿ ರೈತರಿಗೆ, ವಿದ್ಯಾರ್ಥಿಗಳಿಗೆ, ಉದ್ದಿಮೆದಾರರಿಗೆ ಹಾಗೂ ವಿಜ್ಞಾನಿಗಳಿಗೆ ಮುಂದಿನ ಆಧುನಿಕ ಕೃಷಿಗೆ ಬೇಕಾಗುವ ಭವಿಷ್ಯದ ಕೌಶಲ್ಯಗಳು, ಹೊಸ ತಂತ್ರಜ್ಞಾನ ಮತ್ತು ಉತ್ಕೃಷ್ಟ ಇಂಜಿನಿಯರಿಂಗ್ ತಂತ್ರಜ್ಞಾನ, ಪ್ರಾತ್ಯಕ್ಷಿಕೆ ಹಾಗೂ ಕಲಿಕೆ ಮೂಲಕ ತರಬೇತಿ ನೀಡುವುದು.

ಕಂಪೆನಿ ಒದಗಿಸುವ ಆವಿಷ್ಕಾರಕ ತಂತ್ರಜ್ಞಾನಗಳಿಂದ ಯಂತ್ರೋಪಕರಣಗಳ ನಿಖರ ಉಪಯೋಗದಿಂದ ಕೃತಕ ಬುದ್ಧಿವಂತಿಕೆ ಬಳಸಿ, ರೋಬೋಟಿಕ್ ಬಳಕೆ, ಅಭಿವೃದ್ಧಿಪಡಿಸಿದ ಡಾಟಾವನ್ನು ಬುದ್ಧಿವಂತಿಕೆಯಿಂದ ಬಳಸುವ ಯೋಜನೆಯನ್ನು ಕ್ಷೇತ್ರ ಮಟ್ಟದ ಕೃಷಿ ಚಟುವಟಿಕೆಗಳನ್ನು ನಿಖರ ಬೇಸಾಯ ಪದ್ಧತಿಯಲ್ಲಿ ಮಾಡಲು ರೂಪಿಸಲಾಗಿದೆ.

ನೂತನ ಯೋಜನೆಯಲ್ಲಿ ಕ್ಷೇತ್ರಮಟ್ಟದ ಪ್ರಾಯೋಗಿಕ ಕೌಶಲ್ಯಗಳನ್ನು ಕೃಷಿಯಲ್ಲಿ ಅಟೋಮೆಷನ್ ತರುವ ಹಾಗೂ ಸ್ಥಳೀಯ ಬೇಡಿಕೆಗೆ ಅನುಗುಣವಾಗುವಂತೆ ಪಠ್ಯಕ್ರಮಗಳನ್ನು ಕ್ಷೇತ್ರ ಮಟ್ಟದ ಪ್ರಾಯೋಗಿಕ ವಿಷಯಗಳಾದ ಮಣ್ಣು, ಹವಾಮಾನ, ಸ್ಥಳೀಯ ಕ್ಷೇತ್ರ ಪದ್ಧತಿಗಳನ್ನು ಸುಧಾರಣೆ ಮಾಡಿ ತರಬೇತುದಾರರಿಗೆ ತರಬೇತಿ ನೀಡುತ್ತಾ ಗ್ರಾಮೀಣ ಬದುಕನ್ನು ಮತ್ತು ಗ್ರಾಮಸ್ಥರನ್ನು ಹಾಗೂ ಕೃಷಿ ಉದ್ದಿಮೆದಾರರೊಂದಿಗೆ ಸೌಹಾರ್ದತೆಯಿಂದ ಕೃಷಿ ಅಭಿವೃದ್ಧಿಗಾಗಿ ಪೂರಕ ವಾತಾವರಣವನ್ನು ನಿರ್ಮಿಸುವ ಉದ್ದೇಶ ಹೊಂದಿದೆ.

CIDSA ಕೇಂದ್ರಗಳಲ್ಲಿ ತೆರೆಯುವ ಪ್ರಯೋಗಾಲಯಗಳು ಪ್ರಮುಖವಾಗಿ ಕೃಷಿಯನ್ನು ಆಧುನೀಕರಣಗೊಳಿಸುವ ತಂತ್ರಜ್ಞಾನಗಳಾದ ನಿಖರ ಬೇಸಾಯ, ಕೃಷಿಯಲ್ಲಿ ಆಟೋಮೇಷನ್, ಬೇಸಾಯ ಶಾಸ್ತ್ರ, ಕೃಷಿ ಯಂತ್ರೋಪಕರಣಗಳ ವಿನ್ಯಾಸ ಹಾಗೂ ತಯಾರಿಕೆ, ಆಧುನಿಕ ಡ್ರೋನ್ ತಂತ್ರಜ್ಞಾನಗಳನ್ನು ಬಳಕೆ ಮಾಡಿ ಕೃಷಿಯನ್ನು ಹವಾಮಾನ ವೈಪರೀತ್ಯಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವಂತೆ ನಿರಂತರ ಹಾಗೂ ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ಕಾರ್ಯಯೋಜನೆಯನ್ನು ರೂಪಿಸಲಾಗಿದೆ.

ಸ್ಮಾರ್ಟ್ ಕೃಷಿ ಕೇಂದ್ರಗಳು ರಾಜ್ಯದ ಕೃಷಿಯನ್ನು ಹೆಚ್ಚು ಸುಸ್ಥಿರವಾಗುವಂತೆ ಲಾಭದಾಯಕವಾಗುವಂತೆ ಎಂಜಿನಿಯರಿಂಗ್ ನೂತನ ತಂತ್ರಜ್ಞಾನ ಬಳಸಿ ಜಾಗತಿಕವಾಗಿ ಸ್ಪರ್ಧಾತ್ಮಕ ಮಾದರಿಯಲ್ಲಿ ಗುಣಮಟ್ಟದ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಈ ಕೇಂದ್ರಗಳು ಮುಂದುವರೆದು, ಕೃಷಿಯಲ್ಲಿ ನೂತನ ಆವಿಷ್ಕಾರಗಳನ್ನು ತರುವುದು, ಕೃಷಿ ನವೋದ್ಯಮಗಳಿಗೆ ಪ್ರೋತ್ಸಾಹ ನೀಡುವುದು, ಸಣ್ಣ- ಅತಿ ಸಣ್ಣ, ಮಧ್ಯಮ ಹಾಗೂ ದೊಡ್ಡ ಉದ್ದಿಮೆದಾರರನ್ನು ಸೃಷ್ಟಿಸುವುದು ಮತ್ತು ಇವರಿಗೆ ಪೂರಕವಾದ ಸಂಶೋಧನಾ ಯೋಜನೆಗಳನ್ನು ಕೈಗೊಳ್ಳುವುದು. ಅಲ್ಲದೇ ರಾಜ್ಯದಲ್ಲಿ ಕೃಷಿಯಲ್ಲಿ ಹೂಡಿಕೆಯನ್ನು ಹೆಚ್ಚಿಸಲು ಪೂರಕವಾಗಿ ಕಾರ್ಯ ನಿರ್ವಹಿಸುತ್ತವೆ.

ಒಡಂಬಡಿಕೆ ಸಂದರ್ಭದಲ್ಲಿ ಹೆಕ್ಸಾಗಾನ್ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್ ಧರ್ಮರಾಜನ್ ಕೃಷಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಖತ್ರಿ, ಕೃಷಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಸೇರಿದಂತೆ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ಪಾಲ್ಗೊಂಡಿದ್ದರು.

ShareTweetSendShare
Join us on:

Related Posts

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

ಹೈಕಮಾಂಡ್ ಒಪ್ಪದಿದ್ದರೂ ನನ್ನ ಪರ ನಿಂತಿದ್ದರು ಸಿದ್ದು-ನನ್ನನ್ನೇ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು ಸತ್ಯ: ಹಳೆಯ ರಹಸ್ಯ ಬಿಚ್ಚಿಟ್ಟ ಉಪಮುಖ್ಯಮಂತ್ರಿ.

by Shwetha
August 28, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ ಅವರ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೆ ಅಧಿಕಾರ...

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ; ಸಂಪುಟ ಉಪಸಮಿತಿ ರಚನೆ

by Shwetha
August 28, 2026
0

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆಗಳನ್ನು...

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ; ಕೈಲಾಸ ಮಾನಸ ಸರೋವರ ಯಾತ್ರೆಯ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆ

by Shwetha
August 28, 2026
0

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 133 ಭಾರತೀಯರು ಹಾಗೂ 37 ಅನಿವಾಸಿ ಭಾರತೀಯರು ಸೇರಿದಂತೆ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು...

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

ರವಿ ತೇಜ ಇರುಮುಡಿ ಚಿತ್ರಕ್ಕೆ ಮಾರುಹೋದ ರಶ್ಮಿಕಾ: ಇದಪ್ಪಾ ಸಿನಿಮಾ ಅಂದ್ರೆ ಎಂದು ಬಣ್ಣಿಸಿದ ನ್ಯಾಷನಲ್ ಕ್ರಷ್

by Shwetha
August 28, 2026
0

ಮಾಸ್ ಮಹಾರಾಜ ರವಿ ತೇಜ ಅಭಿನಯದ ಇತ್ತೀಚಿನ ಚಿತ್ರ ಇರುಮುಡಿ ಪ್ರೇಕ್ಷಕರ ಮನ ಗೆಲ್ಲುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ...

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ:  ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

ಕ್ಲಬ್ ಮತ್ತು ಚರ್ಚ್‌ಗಳು ನೊಂದಣಿಯಾಗಿವೆಯೇ?ಸಣ್ಣ ಪುಸ್ತಕ ಬಿಟ್ಟು ಅಂಬೇಡ್ಕರ್ ಸಂವಿಧಾನ ಓದಿ: ಬ್ರಿಟಿಷರಿಗೇ ಸಾಧ್ಯವಾಗದ್ದು ಪ್ರಿಯಾಂಕ್ ಖರ್ಗೆ ನಿಮ್ಮಿಂದ ಸಾಧ್ಯವೇ? ಆರ್‌ಎಸ್‌ಎಸ್ ಬೆನ್ನಿಗೆ ನಿಂತ ವಿಪಕ್ಷ ನಾಯಕ

by Shwetha
August 28, 2026
0

ಬೆಂಗಳೂರು: ಆರ್‌ಎಸ್‌ಎಸ್ ನೊಂದಣಿ ವಿಷಯವಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಮತ್ತು ಹಾಕಿದ್ದ ಸವಾಲಿಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram