ಕನ್ನಡ ಭಾಷೆ ಕಲಿಕೆಗೆ ವಿರೋಧ : ಟ್ವಿಟ್ಟರ್ ನಲ್ಲಿ ಹೆಚ್ ಡಿ ಕೆ ಆಕ್ರೋಶ Kannada saaksha tv
ಬೆಂಗಳೂರು : ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸುವುದನ್ನು ವಿರೋಧಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿರುವುದು ನನ್ನ ಗಮನಕ್ಕೆ ಬಂದಿದೆ.
ಇದರ ವಿರುದ್ಧ ರಾಜ್ಯ ಸರಕಾರ ಜವಾಬ್ದಾರಿಯುತವಾಗಿ ನ್ಯಾಯಾಲಯದಲ್ಲಿ ವಾದಿಸಿ, ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ಉಚ್ಚ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕೆಂದು ನಾನು ಮಾನ್ಯ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.









