ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ bs-yeddyurappa saaksha tv
ಬೆಂಗಳೂರು : ಇದೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಲೋಕಸಭಾ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಯಡಿಯೂರಪ್ಪನವರಿಗೆ ಬೆಳ್ಳಿಯ ಪ್ರಶಸ್ತಿ ಫಲಕ ಪ್ರದಾನ ಮಾಡಿ ಗೌರವ ಸಲ್ಲಿಸಲಾಗಿದೆ.
ಇದೇ ವೇಳೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಉಭಯ ಸದನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಸ್ಪೀಕರ್ ಕಾಗೇರಿ, ಲೋಕಸಭೆ ಸ್ಪೀಕರ್ ಜೊತೆ ನಾನು ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ.
ಅತ್ಯುತ್ತಮ ಶಾಸಕ ಪ್ರಶಸ್ತಿ ಲೋಕಸಭೆ ಸೇರಿ ಅನೇಕ ರಾಜ್ಯಗಳಲ್ಲಿದೆ. ಇದಕ್ಕೊಂದು ಸಮಿತಿ ರಚಿಸಲಾಗಿದೆ.
ಆ ಸಮಿತಿಗೆ ನಾನು ಅಧ್ಯಕ್ಷ, ಸಿದ್ದರಾಮಯ್ಯ, ಮಾಧುಸ್ವಾಮಿ, ಆರ್.ವಿ.ದೇಶಪಾಂಡೆ ಸದಸ್ಯರು ಎಂದು ತಿಳಿಸಿದರು.