ಕರ್ನಾಟಕಕ್ಕೆ ಶಾಹೀನ್ ಚಂಡಮಾರುತ ಭೀತಿ Hurricane Shaheen saaksha tv
ಬೆಂಗಳೂರು : ಗುಲಾಬ್ ಚಂಡಮಾರುತದ ಬೆನ್ನಲ್ಲೆ ಕರ್ನಾಟಕಕ್ಕೆ ಶಾಹೀನ್ ಚಂಡಮಾರುತದ ಭೀತಿ ಎದುರಾಗಿದೆ.
ಗುಲಾಬ್ ಚಂಡಮಾರುತದ ಅಬ್ಬರ ಆಂಧ್ರಪ್ರದೇಶ, ಒರಿಸ್ಸಾ, ತೆಲಂಗಾಣ, ಗುಜರಾತ್ ನಲ್ಲಿ ಕಡಿಮೆಯಾಗಿದೆ.
ಆದರೆ, ಈ ಚಂಡಮಾರುತ ಅರಬ್ಬಿ ಸಮುದ್ರದತ್ತ ತೆರಳಿದ್ದು, ಅಲ್ಲಿ ಶಾಹೀನ್ ಚಂಡಮಾರುತದ ರೂಪ ತಾಳಿ ಮತ್ತೆ ಅಪ್ಪಳಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಸೆಪ್ಟೆಂಬರ್ 30ರ ವೇಳೆಗೆ ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಇದೆ.
ಶಾಹೀನ್ ಚಂಡಮಾರುತದ ಪರಿಣಾಮದಿಂದ ಗುಜರಾತ್, ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ ಭಾಗದಲ್ಲಿ ವಿಪರೀತ ಮಳೆಯಾಗಲಿದೆ.
ಆಂಧ್ರಪ್ರದೇಶ, ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.









