ಅಂಗಾಂಗ ಕಸಿ ಮಾಡುವಲ್ಲಿ ಕರ್ನಾಟಕ ಮುಂದು : ಸಚಿವ ಮನ್ಸುಖ್ ಮಾಂಡವೀಯ
ಬೆಂಗಳೂರು : ಅಂಗಾಂಗ ಕಸಿ ಮಾಡುವಲ್ಲಿ ಕರ್ನಾಟಕ ಮುಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಹೇಳಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿಂದು ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನಗಳ ಸಂಸ್ಥೆ ಮತ್ತು ಅಂಗಾಂಗ ಕಸಿ ಮಾಡುವ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಬಡವರಿಗೆ ಅಂಗಾಂಗ ಕಸಿ ಮಾಡಿಸಿಕೊಳ್ಳುವುದು ಕಷ್ಟ.
ಶ್ರೀಮಂತರು ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತಾರೆ. ಆದರೆ ಬಡವರು ಸಂಕಷ್ಟಕ್ಕೆ ಸಿಲುಕುತ್ತಾರೆ. ಬಡವರ ಕುಟುಂಬವನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕ ಉಚಿತ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದೆ. ಅಂಗಾಂಗ ಕಸಿ ಮಾಡುವಲ್ಲಿ ಕರ್ನಾಟಕ ಮುಂದಿದೆ ಎಂದು ಶ್ಲಾಘಿಸಿದರು.
ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರೋಗ ಕ್ಷೇತ್ರದ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿದ್ದಾರೆ. ಅದರ ಸದ್ಬಳಕೆಯನ್ನು ಕರ್ನಾಟಕ ಮಾಡಿಕೊಂಡಿದೆ.
ಸಮಾಜ ಹಾಗೂ ನಾಗರಿಕರು ಆರೋಗ್ಯವಂತರಾಗಿದ್ದಾಗ ದೇಶವು ಅಭಿವೃದ್ಧಿಯಾಗಲಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ವಿಮಾ ಯೋಜನೆ ಜಾರಿಗೆ ತರಲಾಗಿದೆ ಎಂದರು.









