ಡಿಕೆಶಿ ಅವರ ಪದಚ್ಯುತಿಗೆ ಸಿದ್ದರಾಮಯ್ಯ ತಂತ್ರ : ಬಿಜೆಪಿ Siddaramaiah saaksha tv
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಕೆಪಿಸಿಸಿ ಅಧ್ಯಕ್ಷರ ಕಾಲೆಳೆದಿದೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ರಾಜ್ಯ ಬಿಜೆಪಿ, ಮುಖ್ಯಮಂತ್ರಿಯಾಗುವ ಡಿ.ಕೆ.ಶಿವಕುಮಾರ್ ಅವರ ಕನಸಿಗೆ ಕಾಂಗ್ರೆಸ್ ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ.
ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ಬಪಕ್ಷೀಯರೇ ಷರಾ ಬರೆದುಬಿಟ್ಟಿದ್ದಾರೆ. ಈ ಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ “ಡಿಕೆಶಿ ಪದಚ್ಯುತಿ” ಎಂಬ ಮಾಸ್ಟರ್ ಪ್ಲ್ಯಾನ್ನ ಭಾಗವೇ ಎಂದು ಪ್ರಶ್ನಿಸಿದ್ದಾರೆ.
ಡಿ ಕೆ ಶಿವಕುಮಾರ್ ಅವರೇ, ನಿಮ್ಮ ಹುಡುಗರ ಬಳಿ 50 ರಿಂದ 100 ಕೋಟಿ ಇದೆಯಂತೆ, ಹಾಗಾದರೆ ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಬಳಿ ಎಷ್ಟಿರಬಹುದು?
ಇದು ಕೆಪಿಸಿಸಿ ಕಚೇರಿಯಿಂದಲೇ ಎದ್ದಿರುವ ಅಧಿಕೃತ ಅನುಮಾನ. ಈ ಪ್ರಶ್ನೆ ರಾಜ್ಯದ ಜನತೆಯನ್ನೂ ಕಾಡುತ್ತಿದೆ. ಇದಕ್ಕೆ ನೀವಲ್ಲದೆ ಇನ್ಯಾರು ಉತ್ತರಿಸುತ್ತಾರೆ, ಡಿ.ಕೆ.ಶಿವಕುಮಾರ್
ಪ್ರತಿ ಬಾರಿ ದೆಹಲಿ ಭೇಟಿಯ ಬಳಿಕ ಡಿಕೆಶಿ ಅವರ ಪದಚ್ಯುತಿಗೆ ಸಿದ್ದರಾಮಯ್ಯ ತಂತ್ರ ಹೆಣೆಯುತ್ತಾರೆ. ತಂತ್ರದ ಭಾಗವಾಗಿ ಇಂದಿನ ಪ್ರಹಸನ ಬಿಡುಗಡೆಯಾಗಿದೆ.
ಡಿ ಕೆ ಶಿವಕುಮಾರ್ ಅವರ ಬಗ್ಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಸತ್ಯ ಬಿಚ್ಚಿಟ್ಟವರು ಸಿದ್ದರಾಮಯ್ಯ ಅವರ ಶಿಷ್ಯರು ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.