ಹಿಂದೂ ಸಂಘಟನೆ ಕಾರ್ಯಕರ್ತರಿಗೆ ತ್ರಿಶೂಲ ಹಂಚಿದ ವಿಹೆಚ್ಪಿ VHP saaksha tv
ಮಂಗಳೂರು : ಅನೈತಿಕ ಪೊಲೀಸ್ ಗಿರಿ ಪ್ರಕರಣದ ಬೆನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಹರಿತದ ತ್ರಿಶೂಲ ಹಂಚಲಾಗಿದೆ.
ಮಂಗಳೂರಿನ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ತ್ರಿಶೂಲ ದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ 150 ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ತ್ರಿಶೂಲ ನೆಪದಲ್ಲಿ ಹರಿತದ ಕತ್ತಿಯನ್ನು ಹಂಚಲಾಗಿದೆ.
ಇನ್ನು ತ್ರಿಶೂಲ ದೀಕ್ಷೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿದೆ.









