ದೊಡ್ಡಬಳ್ಳಾಪುರ | ಮದುವೆ ಬಸ್ ಪಲ್ಟಿ ಇಬ್ಬರು ಸಾವು doddaballapur saaksha tv
ದೊಡ್ಡಬಳ್ಳಾಪುರ : ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಹಲವು ಮಂದಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಘಾಟಿ ಬಳಿ ನಡೆದಿದೆ.
ಘಾಟಿಯಿಂದ ಗೌರಿಬಿದನೂರು ರಸ್ತೆಗೆ ಬರುವಾಗ ಈ ಘಟನೆ ಸಂಭವಿಸಿದೆ. ಬಸ್ ಪಲ್ಟಿಯಿಂದಾಗಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
15ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಭಾರಿ ಮಳೆಯ ಕಾರಣ ಬಸ್ ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತ ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗೆ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿದ್ದಾರೆ.









