ಕಾಲು ಜಾರಿ ಕೆರೆಯಲ್ಲಿ ಬಿದ್ದು ಇಬ್ಬರು ಸಾವು belagavi saaksha tv
ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ಇಬ್ಬರು ಯುವಕರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
ಮುಂಜಾನೆ ಬರ್ಹಿದೆಸೆಗೆ ಕೆರೆ ಕಡೆಗೆ ಹೋಗಿದ್ದಾಗ ಯುವಕರು ಕಾಲು ಜಾರಿ ಕೆರೆಗೆ ಬಿದ್ದಿದ್ದು, ಈಜು ಬಾರದೇ ನೀರುಪಾಲಾಗಿದ್ದಾರೆ.
ಸುದ್ದಿ ತಿಳಿಯುತ್ತಿದಂತೆ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ ಶೋಧ ಕಾರ್ಯ ನಡೆಸಿದ್ದಾರೆ.
ಸದ್ಯ ಒಂದು ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದೆ. ಮೃತ ವ್ಯಕ್ತಿಯನ್ನು ಕಾಂತೇಶ್ ಬಡಿಗೇರ್ ಎಂದು ಗುರುತಿಸಲಾಗಿದೆ.
ಇನ್ನೊಬ್ಬನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.









