66ನೇ ಕನ್ನಡ ರಾಜ್ಯೋತ್ಸವ | ಕನ್ನಡದಲ್ಲಿ ವಿಶ್ ಮಾಡಿದ ಮೋದಿ, ಶಾ
ಬೆಂಗಳೂರು : ಇಂದು 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕøಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಸಹೋದರ ಮತ್ತು ಸಹೋದರಿಯರಿಗೆ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು ಅದ್ಭುತ ಸಂಸ್ಕೃತಿ, ಖಾದ್ಯ, ಸಂಪ್ರದಾಯಗಳಿಂದ ಆಶೀರ್ವದಿಸಲ್ಪಟ್ಟಿದೆ. ಈ ಚೆಲುವಿನ ನಾಡು ಭಾರತದ ಪ್ರಗತಿಗೆ ಸದಾ ಕೊಡುಗೆ ನೀಡುತ್ತಿರಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.









