ಪುನೀತ್ ಗೆ ಪದ್ಮ ಶ್ರೀ : ಸಿದ್ದರಾಮಯ್ಯ ಮನವಿ puneet raj kumar saaksha tv
ಬೆಂಗಳೂರು : ಕನ್ನಡದ ರಾಜರತ್ನ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಪದ್ಮ ಶ್ರೀ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.









