ಸಿದ್ದರಾಮಯ್ಯನವರಿಗೆ ದಲಿತರು ಎಂದರೆ ಕೇವಲ ಮತಬ್ಯಾಂಕ್ Siddaramaiah saaksha tv
ಬೆಂಗಳೂರು ; ಸಿದ್ದರಾಮಯ್ಯನವರಿಗೆ ದಲಿತರು ಎಂದರೆ ಕೇವಲ ಮತಬ್ಯಾಂಕ್ ಎಂದು ರಾಜ್ಯ ಬಿಜೆಪಿ ಘಟಕ ಕುಟುಕಿದೆ.
ದಲಿತ ವಿರೋಧಿ ಸಿದ್ದರಾಮಯ್ಯ ಎಂಬ ಬಿಜೆಪಿಗರ ಟೀಕೆಗೆ ಸಿದ್ದರಾಮಯ್ಯ ಟ್ವೀಟ್ಟರ್ ನಲ್ಲಿ ಸರಣಿ ಟ್ವೀಟ್ ಗಳ ಮೂಲಕ ಟಾಂಗ್ ನೀಡಿದ್ದರು. ಇದೀಗ ಸಿದ್ದರಾಮಯ್ಯ ಟ್ವೀಟ್ ಗೆ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.
ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಘಟಕ.. ಸಿದ್ದರಾಮಯ್ಯನವರೇ, ತಾನೊಬ್ಬ ಅಹಿಂದ ನಾಯಕ ಎಂದು ಅಧಿಕಾರಕ್ಕೆ ಬಂದ ಮೇಲೆ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವುದು ನಿಮ್ಮ ಕರ್ತವ್ಯ. ಅದರಲ್ಲಿ ಹೆಚ್ಚುಗಾರಿಕೆ ಮೆರೆಯುವ ಅಗತ್ಯವಿಲ್ಲ. ನಾನೇ ಮಾಡಿದ್ದು ಎಂದು ಬೀಗುವಾಗ ಹತ್ತು ಬಾರಿ ಯೋಚಿಸಿ.
ಮಾನ್ಯ ಸಿದ್ದರಾಮಯ್ಯ , ಎಷ್ಟು ಬಾರಿ ಹಳೆ ಕತೆ ಹೇಳುತ್ತೀರಿ ಸ್ವಾಮಿ? ಜನ ಹೊಸದನ್ನು ಬಯಸುತ್ತಿದ್ದಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಂದೆ ನಿಂತು “ದಲಿತರನ್ನು ಮುಖ್ಯಮಂತ್ರಿ” ಮಾಡುತ್ತೇನೆ ಎಂದು ಹೇಳಿ ನೋಡೋಣ. ಆಗ ನಿಮ್ಮ ದಲಿತ ಪ್ರೇಮವನ್ನು ಒಪ್ಪಿಕೊಳ್ಳೋಣ.
ಸಿದ್ದರಾಮಯ್ಯನವರಿಗೆ ದಲಿತರು ಎಂದರೆ ಕೇವಲ ಮತಬ್ಯಾಂಕ್. ಈ ಕಾರಣಕ್ಕಾಗಿಯೇ ನಮ್ಮ ಸರ್ಕಾರವಿದ್ದಾಗ ದಲಿತ ಸಮುದಾಯದ ಅಭಿವೃದ್ಧಿಗೆ ಹಣ ನೀಡಿದ್ದೇನೆ ಎಂದು ಹೇಳುತ್ತಾರೆ. ಅಂತರ್ಯದಲ್ಲಿ ದಲಿತ ನಾಯಕರನ್ನು ತುಳಿದು ಅಧಿಕಾರಕ್ಕೆ ಏರುತ್ತಾರೆ. ಸಿದ್ದರಾಮಯ್ಯ ಅವರದು ಬಣ್ಣದ ತಗಡಿನ ತುತ್ತೂರಿ ಎಂದು ಕಿಡಿಕಾರಿದೆ.









