ಅಪ್ಪು ಕೆಲಸಕ್ಕೆ ನನ್ನ ಕೈಲಾದಷ್ಟು ಸಹಾಯ : ರೇಣುಕಾಚಾರ್ಯ puneeth Raj Kumar saaksha tv
ಬೆಂಗಳೂರು : ಪುನೀತ್ ರಾಜಕುಮಾರ್ ಅವರ ಸಮಾಜಮುಖಿ ಕೆಲಸಕ್ಕೆ ನಾನು ಸಹ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಇಂದು ರೇಣುಕಾಚಾರ್ಯ ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ ಅಗಲಿ ಇಂದಿನ 8 ದಿನಗಳಾಯಿತು.
ಅವರ ಅಕಾಲಿಕ ನಿಧನದಿಂದ ಅವ್ರ ಕುಟುಂಬಕ್ಕೆ, ಅಭಿಮಾನಿಗಳಿಗೆ, ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದರು.
ಇನ್ನು ಅಪ್ಪು ಸಾಮಾಜಿಕ ಕಳಕಳಿಯ ಚಿತ್ರಗಳು ನಮಗೆ ಇಷ್ಟವಾಗಿವೆ. ಅಪ್ಪು ಸೇವೆ ಅಪಾರವಾದದ್ದು.
ಶಕ್ತಿಧಾಮದಲ್ಲಿ ಸಾವಿರಾರು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ.
ಅದಕ್ಕೆ ನಾನು ನನ್ನ ಕೈಲಾದ ಸೇವೆ ಮಾಡಲು ಬಯಸುತ್ತೇನೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.









