ದೀಪಾವಳಿ ವೇಳೆ ಗೋ ಪೂಜೆಯ ಮಹತ್ವದ ತಿಳಿಸಿದ ಹೆಚ್ ಡಿಕೆ H D Kumaraswamy saaksha tv
ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಗೋಮಾತೆ ಪೂಜೆ ಮಾಡಿದ್ದಾರೆ.
ಅಲ್ಲದೆ ಈ ಬಗ್ಗೆ ಟ್ವೀಟ್ ಮಾಡಿ ಗೋ ಪೂಜೆಯ ಬಗ್ಗೆ ಮಹತ್ವ ತಿಳಿಸಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ನಲ್ಲಿ… ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು.
ಇಂದ್ರನ ದಾಳಿಯಿಂದ ತನ್ನ ಗೋ ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು.
ಆದ್ದರಿಂದಲೇ ಇಂದು ಗೋ ಪೂಜೆ, ಗೋವರ್ಧನ ಪೂಜೆ. ಕೆಲವೆಡೆ ರೈತರು ಇದನ್ನು ಹಟ್ಟಿಹಬ್ಬವೆಂದು ಆಚರಿಸುತ್ತಾರೆ.
ಅದರಲ್ಲೂ ಬೆಳಕಿನ ಹಬ್ಬ ದೀಪಾವಳಿ ವೇಳೆ ಗೋವಿನ ಪೂಜೆಗೆ ವಿಶೇಷ ಮಹತ್ವವಿದೆ.
ಈ ಹಿನ್ನೆಲೆಯಲ್ಲಿ ಬಿಡದಿಯ ನನ್ನ ತೋಟದಲ್ಲಿ ಗೋ ಪೂಜೆಯನ್ನು ಇಂದು ನೆರವೇರಿಸಲಾಯಿತು.
ಮತ್ತೊಮ್ಮೆ ಎಲ್ಲರಿಗೂ ದೀಪಾವಳಿ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.









