ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ : ಬಿ.ಸಿ.ಪಾಟೀಲ್ B C Patil saaksha tv
ಗದಗ : ರೈತರ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರ್ಕಾರ ಬದ್ಧ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಕೃಷಿ ಸಚಿವ ಬಿ.ಸಿ ಪಾಟೀಲ್ ಗದಗ ಜಿಲ್ಲೆ ನರಗುಂದ ತಾಲೂಕಿನ ಹಲವು ಗ್ರಾಮಗಳಲ್ಲಿ “ರೈತರೊಂದಿಗೆ ಒಂದು ದಿನ ” ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ವೇಳೆ ಸಚಿವರು ಸ್ವತಃ ಕೃಷಿ ಚಟುವಟಿಗಳಲ್ಲಿ ತೊಡಗಿಕೊಂಡು, ಬೆಳೆಗಳ ಕುರಿತು ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಸಚಿವರು, ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ರೈತರ ಮನೆ ಬಾಗಿಲಿಗೆ ಬಂದಿದೆ.
ಕೃಷಿಕರನ್ನು ಸ್ವಾವಲಂಭಿನಿಗಳನ್ನಾಗಿಸುವ ಗುರಿ ಹೊಂದಲಾಗಿದೆ. ರೈತರ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.
ಬಳಿಕ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಮಾತನಾಡಿ, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ.
ನ್ಯಾಯಾಲಯ ಸಮ್ಮತಿಸಿದರೆ ಮಲಪ್ರಭಾ ನದಿಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.









