ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೈತರಿಗೆ ಪರಿಹಾರ ನೀಡಿ : ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

Mahesh M Dhandu by Mahesh M Dhandu
November 11, 2021
in Newsbeat, Politics, ರಾಜಕೀಯ
Basavaraja bommai saaksha tv
Share on FacebookShare on TwitterShare on WhatsappShare on Telegram

ರೈತರಿಗೆ ಪರಿಹಾರ ನೀಡಿ : ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು : ನವೆಂಬರ್ ತಿಂಗಳ ಮಧ್ಯಭಾಗದಲ್ಲೂ ರಾಜ್ಯದ ಹಲವೆಡೆ ನಿರಂತರ ಮಳೆ ಬೀಳುತ್ತಿರುವ ಕಾರಣ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು ಬೆಳೆದ ರೈತರು ಬೆಳೆನಷ್ಟ ಅನುಭವಿಸುತ್ತಿದ್ದಾರೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಈ ಹಿನ್ನೆಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸುದೀರ್ಘ ಪತ್ರ ಬರೆದಿರುವ ಸಿದ್ದರಾಮಯ್ಯ..

ನವೆಂಬರ್ ತಿಂಗಳ ಮಧ್ಯಭಾಗಕ್ಕೆ ಬರುತ್ತಿದ್ದರೂ ರಾಜ್ಯದಲ್ಲಿ ಮಳೆ ನಿಲ್ಲುತ್ತಿಲ್ಲ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ.

ಇದರಿಂದಾಗಿ ಕೊಯಿಲಿನ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ರಾಜ್ಯದಲ್ಲಿ ವಾಡಿಕೆಯಂತೆ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ.

ಆದರೆ ಕೊರೊನಾ ಸಮಸ್ಯೆ ಬಂದ ನಂತರ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಅದರಿಂದಾಗಿ ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು.

ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ.

ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ.

ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ.

ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ. ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ.

ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ.

ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‍ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ.

ಆದರೆ ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಕಳೆದ ಒಂದೂವರೆ ತಿಂಗಳಿಂದ ಅತಿ ಹೆಚ್ಚು ಮಳೆ ಬಿದ್ದು ಹಾನಿಯಾಗಿರುವ ಜಿಲ್ಲೆಗಳ ಮಾಹಿತಿಯೆ ಇಲ್ಲ.

ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿ ಇಲ್ಲ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೆ ನಡೆಸಿಲ್ಲ.

ಇನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅನೇಕ ಕಡೆ ಬರದ ಸಮಸ್ಯೆಯೂ ಇದೆ.

Basavaraja Bommai  saaksha tv
ಇಷ್ಟೆಲ್ಲ ಆದರೂ ಸಹ ಸರ್ಕಾರ ಕೈ ಕಟ್ಟಿ ಕುಳಿತಿದೆ. ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡುತ್ತಿಲ್ಲ.

ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019-20, 2020-21 ರ ವರ್ಷಗಳಲ್ಲಿ ಸುಮಾರು 1.5 ರಿಂದ 2 ಲಕ್ಷ ಕೋಟಿ ರೂ.ವರೆಗೆ ನಷ್ಟವಾಗಿತ್ತು.

ಆದರೆ ಕೇಂದ್ರ ಸರ್ಕಾರ 2019-20 ರಲ್ಲಿ 1652.85, 2020-21 ರಲ್ಲಿ 1328.30 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ.

ಅಂದರೆ ಒಟ್ಟು ಬಿಡುಗಡೆ ಮಾಡಿದ ಹಣ ಕೇವಲ 2981.15 ಕೋಟಿ ರೂ. ಮಾತ್ರ. 2021-22ರ ನಷ್ಟಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ.

ಕೇಂದ್ರ ಮತ್ತು ರಾಜ್ಯಗಳೆರಡೂ ಈ ಮಟ್ಟದ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆಯಾಗುತ್ತದೆ. ಕೊರೊನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ.

ಈ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೆ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Tags: #Saaksha TVBasavaraja BommaiCongressSiddaramaiah
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram