ಹುಚ್ಚುತನವೋ.. ದೇಶದ್ರೋಹವೋ… : ಕಂಗನಾ ವಿರುದ್ಧ ವರುಣ್ ಗಾಂಧಿ ಆಕ್ರೋಶ
ನವದೆಹಲಿ : ಒಂದಿಲ್ಲೊಂದು ವಿವಾದಕ್ಕೆ ನಾಂದಿಯಾಡುವ ನಟಿ ಕಂಗನಾ ರಣಾವತ್ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಟ್ವಿಟ್ಟರ್ ವೇದಿಕೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆಯೇ ತಿರಸ್ಕಾರ ಮನೋಭಾವ ಈ ರೀತಿಯ ಆಲೋಚನೆಯನ್ನು ಹುಚ್ಚುತನ ಎನ್ನಬೇಕೋ ಅಥವಾ ದೇಶದ್ರೋಹ ಎಂದು ಕರೆಯಬೇಕೋ ಎಂದು ವರುಣ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ಇದಕ್ಕೆ ಕಾರಣ, ಖಾಸಗಿ ವಾಹಿನಿಯಲ್ಲಿ ಮಾತನಾಡುವಾಗ ಕಂಗನಾ, ನಮ್ಮ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ, 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದಿದ್ದರು. ಇದಕ್ಕೆ ವರುಣ್ ಗಾಂಧಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಒಮ್ಮೆ ಮಹಾತ್ಮ ಗಾಂಧೀಜಿಯವರ ತ್ಯಾಗ ಮತ್ತು ತಪಸ್ಸಿಗೆ ಅವಮಾನ, ಮತ್ತೆ ಗಾಂಧೀಜಿ ಹಂತಕನಿಗೆ ಗೌರವ. ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆಯೇ ತಿರಸ್ಕಾರ ಮನೋಭಾವ. ಈ ರೀತಿಯ ಆಲೋಚನೆಯನ್ನು ಹುಚ್ಚುತನ ಎನ್ನಬೇಕೋ ಅಥವಾ ದೇಶದ್ರೋಹ ಎಂದು ಕರೆಯಬೇಕೋ ಎಂದು ಕಂಗನಾ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.









