ಮುಂದಿನ ದಿನಗಳಲ್ಲಿ ದೇಶವನ್ನ ಇನ್ನೂ ಎತ್ತರಕ್ಕೆ ಕೊಂಡೊಯ್ಯಬೇಕು : ಮೋದಿ
ಶಿಮ್ಲಾ : ಮುಂಬರುವ ದಿನಗಳಲ್ಲಿ ದೇಶವನ್ನು ನಾವು ಇನ್ನೂ ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ.
ಅಸಾಧಾರಣ ಗುರಿಗಳನ್ನು ತಲುಪಬೇಕಾಗಿದೆ. ಪ್ರತಿಯೊಬ್ಬರ ಪರಿಶ್ರಮ, ಪ್ರಯತ್ನದಿಂದ ಮಾತ್ರ ಇದು ಸಾಧ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶಿಮ್ಲಾದಲ್ಲಿ ನಡೆಯುತ್ತಿರುವ ಎರಡು ದಿನಗಳ 82ನೇ ಅಖಿಲ ಭಾರತ ಪೀಠಾಸೀನ ಅಧಿಕಾರಿಗಳ ಸಮ್ಮೇಳನವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ಎಂಬುದು ಕೇವಲ ಒಂದು ವ್ಯವಸ್ಥೆಯಲ್ಲ, ಅದು ಭಾರತದ ನೈಸರ್ಗಿಕ ಪ್ರವೃತ್ತಿಯಾಗಿದೆ.
ಮುಂಬರುವ ದಿನಗಳಲ್ಲಿ ದೇಶವನ್ನು ನಾವು ಇನ್ನೂ ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ.
ಅಸಾಧಾರಣ ಗುರಿಗಳನ್ನು ತಲುಪಬೇಕಾಗಿದೆ. ಪ್ರತಿಯೊಬ್ಬರ ಪರಿಶ್ರಮ, ಪ್ರಯತ್ನದಿಂದ ಮಾತ್ರ ಇದು ಸಾಧ್ಯವಾಗಲಿದೆ.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಪಾತ್ರವೂ ಮುಖ್ಯವಾಗಿರುವುದರಿಂದ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳು ಆಧಾರಸ್ತಂಬಗಳಾಗಿವೆ.
ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳನ್ನು ಒಗ್ಗೂಡಿಸಿ ಸಂಘಟಿತವಾಗಿ ಕೊರೋನಾ ಸಾಂಕ್ರಾಮಿಕ ವಿರುದ್ಧ ಸಮರ ಸಾರಿತು. ಇದೊಂದು ಐತಿಹಾಸಿಕ ಹೋರಾಟವಾಗಿದೆ ಎಂದರು.
ದೇಶ ಇಂದು 110 ಕೋಟಿ ಲಸಿಕೆ ನೀಡಿಕೆಯ ಮೈಲಿಗಲ್ಲು ದಾಟಿದೆ. ಇದು ಭಾರತದಿಂದ ಸಾಧ್ಯವಿಲ್ಲ ಎಂದು ಮೊದಲು ಹೇಳಲಾಗಿತ್ತು. ಆದರೆ ಇದನ್ನು ದೇಶ ಸಾಧ್ಯವಾಗಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.









