ಹಿರಿಯ ನಟ ಕೈಕಾಲ ನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರ
ಹೈದರಾಬಾದ್ : ಹಿರಿಯ ನಟ ಕೈಕಾಲ ಸತ್ಯನಾರಾಯಣ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.
ಸದ್ಯ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಕಳೆದ ತಿಂಗಳು 30 ರಂದು ಮನೆಯಲ್ಲಿ ಕಾಲು ಜಾರಿ ಬಿದ್ದು ಅಸ್ವಸ್ಥಗೊಂಡ ಹಿರಿಯ ನಟ, ಆಸ್ಪತ್ರೆಯಲ್ಲಿ ಕೆಲ ದಿನ ಚಿಕಿತ್ಸೆ ಪಡೆದಿದ್ದರು. ನಂತರ ಡಿಸ್ಚಾರ್ಜ್ ಮಾಡಲಾಗಿತ್ತು.
ಆದ್ರೆ ಇತ್ತೀಚೆಗೆ ಅವರು ಮತ್ತೊಮ್ಮೆ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.