ಶುರುವಾಗಿದೆ… ಸಖತ್ ಸಿನಿಮಾದ ಹಾಡು ಬಿಡುಗಡೆ
ಮಾತಿನ ಈಟಿಯ ಬೀಸಿ.. ಲಾಟಿನು ಕಣ್ಣಲ್ಲೇ ಉರಿಸಿ.. ಬೇಟೆಗೆ ಬಂದಳು ರೂಪಿಸಿ.. ಈಕೆಯ ಕೈಯಿಂದ ಉಳಿಸಿ.. ಎಂಬ ಸಾಲುಗಳೊಂದಿಗೆ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಸಖತ್ ಸಿನಿಮಾದ ಶುರುವಾಗಿದೆ ಅನ್ನೋ ಮೆಲೋಡಿ ಸಾಂಗ್ ರಿಲೀಸ್ ಆಗಿದೆ.
ಸಿಂಪಲ್ ಸುನಿ ನಿರ್ದೇಶನದ ಸಖತ್ ಸಿನಿಮಾ ಇದೇ ತಿಂಗಳ 26 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೋಸಕ್ಷನ್ ನಡಿ ನಿರ್ಮಾಣವಾಗಿರುವ ಈ ಚಿತ್ರದ ಪ್ರಮೋಷನ್ ಕೂಡ ತುಂಬಾ ಡಿಫರೆಂಟ್ ಆಗಿ ನಡೆಯುತ್ತಿದೆ.
ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾ ಟ್ರೈಲರ್ ಗೆ ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕಿದೆ. ಹಾಗೇ ಚಿತ್ರದ ಹಾಡುಗಳು ಕೂಡ ಎಲ್ಲರ ಗಮನ ಸೆಳೆಯುತ್ತಿವೆ.
ಇದೀಗ ಇವತ್ತು ಸಿನಿಮಾದ ಶುರುವಾಗಿದೆ ಅನ್ನೋ ಸಾಂಗ್ ರಿಲೀಸ್ ಆಗಿದ್ದು, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಅರ್ಜುನ್ ಲೂಯಿಸ್ ಸಾಹಿತ್ಯ ಬರೆದು, ಸಿದ್ದಿ ಶ್ರೀರಾಮ್ ಕಂಠದಲ್ಲಿ “ಶುರುವಾಗಿದೆ” ಹಾಡು ಮೂಡಿಬಂದಿದೆ.
ಕೆವಿಎನ್ ಪೆÇ್ರಡಕ್ಷನ್‍ನಡಿ ತಯಾರಾಗಿರುವ ಸಖತ್ ಚಿತ್ರಕ್ಕೆ ನಿಶಾ ವೆಂಕಟ್ ಕೋನಾಂಕಿ ಹಾಗೂ ಸುಪ್ರಿತ್ ಬಂಡವಾಳ ಹೂಡಿದ್ದಾರೆ.
ಚಮಕ್ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಕಚಗುಳಿ ಕೊಟ್ಟಿದ್ದ ಗಣಿ-ಸುನಿ ಈ ಬಾರಿ ಸಖತ್ ಸಿನಿಮಾ ಮೂಲಕ ಕಾಮಿಡಿ ಹೂರಣ ಬಡಿಸಲು ನವೆಂಬರ್ 26ಕ್ಕೆ ಥೀಯೇಟರ್ ಗಳಿಗೆ ಬರುತ್ತಿದ್ದಾರೆ.
ಸಿನಿಮಾದಲ್ಲಿ ಅಂಧನ ಪಾತ್ರಕ್ಕೆ ಗಣೇಶ್ ಬಣ್ಣ ಹಚ್ಚಿದ್ದಾರೆ. ನಿಶ್ವಿಕಾ ನಾಯ್ಡು ಹಾಗೂ ಸುರಭಿ ಚಿತ್ರದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಧರ್ಮಣ್ಣ ಕಡೂರು ಸೇರಿದಂತೆ ಮುಂತಾದವರು ತಾರಾಗಣದಲ್ಲಿದ್ದಾರೆ.