ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು Anna Hazare saaksha tv
ಮಹಾರಾಷ್ಟ್ರ : ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುಣೆಯ ರುಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಅಣ್ಣಾ ಹಜಾರೆ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಭಾಗಿಯಾಗಿದ್ದರು.
ಈ ಹಿಂದೆ ಲೋಕಪಾಲ್ ಮಸೂದೆ ಜಾರಿಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದರು.