ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ವಿಧಿವಶ Prof.K.S. Narayanacharya saaksha tv
ಬೆಂಗಳೂರು : ರಾಮಾಯಣಾಚಾರ್ಯ ಎಂದೇ ಖ್ಯಾತಿ ಪಡೆದಿದ್ದ ಸುಪ್ರಸಿದ್ಧ ಲೇಖಕ ಹಾಗೂ ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ನಿಧನರಾಗಿದ್ದಾರೆ. ಅವರಿಗೆ (88) ವಯಸ್ಸಾಗಿತ್ತು.
ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮಾಯಣಾಚಾರ್ಯರು ಕೊನೆಯುಸಿರೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
1933ರಲ್ಲಿ ಕನಕಪುರದಲ್ಲಿ ಜನಿಸಿದ ಕೆ. ಎಸ್. ನಾರಾಯಣಾಚಾರ್ಯ ಅವರು, ಬೇಂದ್ರೆಯವರಿಂದ ಪ್ರಭಾವಿತರಾಗಿ ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು.
ಕೆ. ಎಸ್. ನಾರಾಯಣಾಚಾರ್ಯ ಅವರು ಶ್ರೀ ರಾಮಾವತಾರ ಸಂಪೂರ್ಣವಾದಾ, ಶ್ರೀ ರಾಮಾಯಣ ಪಾತ್ರ ಪ್ರಪಂಚ, ಶ್ರೀ ಮಹಾಭಾರತ ಪಾತ್ರ ಪ್ರಪಂಚ ಸೇರಿ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.
ವಿದ್ವನ್ಮಣಿ, ವೇದಭೂಷಣ, ವಾಲ್ಮೀಕಿ ಹೃದಯಜ್ಞ, ರಾಮಾಯಣಾಚಾರ್ಯ, ಮಹಾಭಾರತಾಚಾರ್ಯ ಮೊದಲಾದ ಬಿರುದುಗಳು ಕೆ. ಎಸ್. ನಾರಾಯಣಾಚಾರ್ಯ ದೊರೆತಿವೆ.