52ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಇಂದು ಸಮಾಪನ Film Festival saaksha tv
ಗೋವಾ : 52 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಇಂದು ತೆರೆ ಬೀಳಲಿದೆ.
ಗೋವಾದ ಪಣಜಿಯಲ್ಲಿ ಕಳೆದ 20 ರಿಂದ 52 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯುತ್ತಿತ್ತು.
ಈ ಚಿತ್ರೋತ್ಸವದಲ್ಲಿ ದೇಶ-ವಿದೇಶಗಳ ಹಲವಾರು ಜನಪ್ರಿಯ ಚಿತ್ರಗಳು ಪ್ರದರ್ಶನ ಕಂಡಿವೆ.
ಸಿನಿಮಾ ನಿರ್ಮಾಣದ ವಿವಿಧ ಆಯಾಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರ ಗೋಷ್ಠಿಗಳು ಹಾಗೂ ಸಂವಾದ ಕಾರ್ಯಕ್ರಮಗಳು ನಡೆದಿವೆ.
ಇನ್ನು ಈ ಸಮಾರೋಪ ಕಾರ್ಯಕ್ರಮದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ಹಾಗೂ ದೇಶ-ವಿದೇಶಗಳಿಂದ ಚಿತ್ರೋದ್ಯಮದ ವಿವಿಧ ಗಣ್ಯರು ಭಾಗವಹಿಸಿದ್ದಾರೆ.









