ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ : ಸವಾರ ಸಾವು
ರಾಮನಗರ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಯ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿವೆ. 26 ವರ್ಷದ ಬಾಲ ನಾಯ್ಕ ಮೃತ ವ್ಯಕ್ತಿಯಾಗಿದ್ದಾನೆ.
ಬಾಲ ಮತ್ತು ಆತನ ಸ್ನೇಹಿತ ರಾಜು ಬೈಕ್ ನಲ್ಲಿ ರಾಮನಗರಕ್ಕೆ ಬರುತ್ತಿದ್ದರು.
ಲಕ್ಷ್ಮೀಪುರ ಸಮೀಪದ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಘಟನೆಯಲ್ಲಿ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಬಾಲ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಹಿಂಬದಿ ಸವಾರ ರಾಜು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಿದ್ದಾರೆ.









