ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆರ್.ಕೆ ನಿರ್ದೇಶನದಲ್ಲಿ “ಕಾಣಿಯಾಗಿದ್ದಾಳೆ” ಹುಡುಕಿ ಕೊಟ್ಟವರಿಗೆ ಬಹುಮಾನ..!

Mahesh M Dhandu by Mahesh M Dhandu
December 7, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಆರ್.ಕೆ ನಿರ್ದೇಶನದಲ್ಲಿ “ಕಾಣಿಯಾಗಿದ್ದಾಳೆ” ಹುಡುಕಿ ಕೊಟ್ಟವರಿಗೆ ಬಹುಮಾನ..!

 ಹಳ್ಳಿ ಸೊಗಡಿನ ಈ ಚಿತ್ರಕ್ಕೆ ಧರ್ಮಗಿರಿ ಶ್ರೀ ಮಂಜುನಾಥ ದೇಗುಲದಲ್ಲಿ ಮುಹೂರ್ತ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಶ್ರೀ ಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗತ್ತಿರುವ, ಆರ್ ಕೆ ನಿರ್ದೇಶನದ “ಕಾಣಿಯಾಗಿದ್ದಾಳೆ” ಹುಡುಕಿ ಕೊಟ್ಟವರಿಗೆ ಬಹುಮಾನ ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಆರಂಭ ಫಲಕ ತೋರಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಚಿತ್ರದ ಶೀರ್ಷಿಕೆ ಇಷ್ಟವಾಯಿತು. ಮೊದಲ ದೃಶ್ಯದಲ್ಲಿ ನಾಯಕ ಉದ್ದನೆಯ ಸಂಭಾಷಣೆ ಹೇಳಿದ್ದು, ಆತನಲ್ಲಿರುವ ಉತ್ಸಾಹ ಕಾಣಿಸಿತು. ನಿರ್ದೇಶಕ, ನಿರ್ಮಾಪಕ ಹಾಗೂ ಇಡೀ ತಂಡ ಸೇರಿ  ಚಿತ್ರ ನಿರ್ಮಾಣ ಮಾಡುತ್ತಾರೆ. ಕೊನೆಯದಾಗಿ ಪ್ರೇಕ್ಷಕ ಆ ಚಿತ್ರ ಮೆಚ್ಚಬೇಕು. ಅಂತಹ ಉತ್ತಮ ಚಿತ್ರಗಳ ನಿರ್ಮಾಣ ಹೆಚ್ಚಾಗಲಿ ಎಂದ, ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೊಂದು ಹಳ್ಳಿ ಸೊಗಡಿನ ಸಿನಿಮಾ. ಮಂಡ್ಯ ಹಾಗೂ ಬೆಂಗಳೂರು ಎರಡು ಪ್ರಾಂತ್ಯಗಳ ಭಾಷೆಗಳಲ್ಲಿ ಈ ಚಿತ್ರದ ಸಂಭಾಷಣೆ ಇರುತ್ತದೆ. ಅರ್ಧ ಕಾಲ್ಪನಿಕ ಹಾಗೂ ಅರ್ಧ ನೈಜಘಟನೆ ಆಧರಿಸಿದ ಕಥೆ ಇರುತ್ತದೆ. ಹಳ್ಳಿ ಹುಡುಗಿಯೊಬ್ಬಳು ಐ ಎ ಎಸ್ ಓದುವ ಸಲುವಾಗಿ ಪಟ್ಟಣಕ್ಕೆ ಬರುತ್ತಾಳೆ. ಸಿಟಿಗೆ ಬಂದ ಹುಡುಗಿ ಎರಡು, ಮೂರು ವರ್ಷಗಳ ಕಾಲ ಹಳ್ಳಿಗೆ ಬಂದಿರುವುದಿಲ್ಲ. ಆ ಹುಡುಗಿಯನ್ನು ಹುಡುಕಿಕೊಂಡು ನಾಯಕ ಹಾಗೂ ಆತನ ಸ್ನೇಹಿತರು ಸಿಟಿಗೆ ಬರುತ್ತಾರೆ. ನಂತರ ಏನಾಗುತ್ತದೆ ಎಂಬುದು ಚಿತ್ರದಲ್ಲಿ ನೋಡಬೇಕು. ಕುಟುಂಬ ಸಮೇತ ನೋಡಬಹುದಾದ ಸಿನಿಮಾ ನಮ್ಮದು. ಬೆಂಗಳೂರು, ಮಂಡ್ಯ, ಸಾಗರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ನಾನು ಈ ಹಿಂದೆ “ಮದರ್ ಸವಿತಾ” ಹಾಗೂ “ನನ್ನ ಕನಸುಗಳು” ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದೆ. ಇದು ನನ್ನ ಮೂರನೇ ಚಿತ್ರ ಎಂದರು ನಿರ್ದೇಶಕ ಆರ್.ಕೆ. ನಮ್ಮ ಚಿತ್ರದಲ್ಲಿ ಎರಡು ಹಾಡುಗಳಿವೆ ‌  ಒಂದು ಹಾಡನ್ನು ಪುನೀತ್ ರಾಜಕುಮಾರ್  ಅವರಿಂದ ಹಾಡಿಸುವ ಆಸಯಿತ್ತು ಎಂದು,  ಅಪ್ಪು ಅವರನ್ನು ನೆನೆದು ನಿರ್ದೇಶಕರು ಭಾವುಕರಾದರು.aneyagiddale hudukikottorige bahumana saakshatv

“ದೃಶ್ಯ 2” ಗೆ ಸಿಕ್ತು ಯು\ಎ ಪ್ರಮಾಣ ಪತ್ರ

ನಾನು ನಾಯಕನಾಗಿ ನಟಿಸುತ್ತಿರುವ ಮೊದಲ ಸಿನಿಮಾ ಇದು. ಇದರಲ್ಲಿ ನನ್ನದು ಕಾಲೇಜು ಹುಡುಗನ ಪಾತ್ರ. ಹಳ್ಳಿಯಲ್ಲಿ  ಓದುತ್ತಿರುವಾಗಲೇ ಆತ ಪ್ರೀತಿಯ ಬಲೆಯಲ್ಲಿ ಬೀಳುತ್ತಾನೆ. ಸಿಟಿಗೆ ಓದಲು ಹೋದ ಪ್ರೇಯಸಿ‌ ಕಾಣೆಯಾದಾಗ‌ ಅವಳ ಹುಡುಕಿ‌‌ ನಗರಕ್ಕೆ ತನ್ನ ಗೆಳೆಯರೊಂದಿಗೆ ಬರುತ್ತಾನೆ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಂಡರು ವಿನಯ್ ಕಾರ್ತಿಕ್.

ನಾನು ಕನ್ನಡ ಹಾಗೂ ತೆಲುಗು ಧಾರಾವಾಹಿಗಳಲ್ಲಿ ಹಾಗೂ ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಹಳ್ಳಿ ಹುಡುಗಿಯೊಬ್ಬಳು ಐ ಎ ಎಸ್ ಓದುವ ಹಂಬಲದಿಂದ ನಗರಕ್ಕೆ ಬರುತ್ತಾಳೆ. ಓದಲು ಬಂದ ಹುಡುಗಿ,‌ ಕೆಲವು ದಿನಗಳ ಕಾಲ ತನ್ನ ಪ್ರಿಯಕರ ಸೇರಿದಂತೆ ಯಾರ ಸಂಪರ್ಕಕ್ಕು ಸಿಕ್ಕಿರುದಿಲ್ಲ. ಆಕೆಯನ್ನು ಹುಡುಕಿಕೊಂಡು ನಾಯಕ ನಗರಕ್ಕೆ ಆಗಮಿಸುತ್ತಾನೆ. ನಂತರ ನಾಯಕ – ನಾಯಕಿಯ ಜೀವನದಲ್ಲಿ ಏನಾಗುತ್ತದೆ ಎಂಬುದೆ ಈ ಚಿತ್ರದ ಕಥಾಹಂದರ. ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಾಯಕಿ‌ ಕೀರ್ತಿ ಭಟ್.

ನಾನು ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಯಾರು ಏನೇ ಹೇಳಿದರು ನನ್ನ ಮಗನೇ ಸರಿ‌ ಎನ್ನುವ ತಾಯಿಯ ಪಾತ್ರ ನನ್ನ‌ದು ಎನ್ನುತ್ತಾರೆ ಹಿರಿಯ ‌ನಟಿ‌ ಗಿರಿಜಾ‌ ಲೋಕೇಶ್. ಕಾರ್ಯಕಾರಿ ನಿರ್ಮಾಪಕರಾದ ಸಂಜಯ್ ಮಾಗನೂರು, ನಟಿ ಅಂಜನಾ ಹಾಗೂ‌ ಸಂಗೀತ ನಿರ್ದೇಶಕ ಕೌಶಿಕ್ ಮಾಧ್ಯಮದ ಮುಂದೆ ಕೆಲವು ಮಾತುಗಳನ್ನು ಹಂಚಿಕೊಂಡರು. ಆರ್ ಕೆ ಅವರೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಕೌಶಿಕ್ ಸಂಗೀತ ನಿರ್ದೇಶನ, ನಾಗರಾಜ್ ಛಾಯಾಗ್ರಹಣ ಹಾಗೂ ಶಿವರಾಜ್ ಮೇಹು ಅವರ ಸಂಕಲನವಿದೆ. ವಿನಯ್ ಕಾರ್ತಿಕ್, ಕೀರ್ತಿ ಭಟ್, ಗಿರಿಜಾ ಲೋಕೇಶ್, ವಿನಯಾಪ್ರಸಾದ್, ಬಿರಾದಾರ್, ಜಯರಾಂ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಾನು ಕರ್ನಾಟಕದವಳು ಅಂತ ಹೇಳಿಕೊಳ್ಳುವುದಕ್ಕೆ ಹೆಮ್ಮೆ ಇದೆ

Tags: #saakshatvkaneyagiddalekannada filmSandalwood
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram