ಕಿವೀಸ್ ವಿರುದ್ಧ ಸರಣಿ | ಅಶ್ವಿನ್ ಗೆ ಲಾಭ.. ಜಡೇಜಾಗೆ ನಷ್ಟ Ashwin saaksha tv
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಟೀಮ್ ಇಂಡಿಯಾ ಗೆದ್ದು ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಈಗ ಆಟಗಾರರ ಶ್ರೇಯಾಂಕದಲ್ಲೂ ಹೆಚ್ಚು ಕಡಿಮೆ ಆಗಿದೆ.
ಟೀಮ್ ಇಂಡಿಯಾದ ಟ್ರಂಪ್ಕಾರ್ಡ್ ಸ್ಪಿನ್ನರ್ ರವಿಚಂದ್ರನ್ ಆಶ್ವಿನ್ ಪಾಲಿಗೆ ಕಿವೀಸ್ ಸರಣಿ ಲಾಭ ಮಾಡಿಕೊಟ್ಟಿದೆ. ಮತ್ತೊಬ್ಬ ಆಲ್ರೌಂಡರ್ ರವೀಂದ್ರ ಜಡೇಜಾಗೆ ಸ್ಥಾನ ನಷ್ಟ ಮಾಡಿದೆ.
ಆಲ್ರೌಂಡರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ ಒಂದು ಮೇಲೇರಿದ್ದು, ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಆಶ್ವಿನ್ 360 ಅಂಕಗಳನ್ನು ಹೊಂದಿದ್ದಾರೆ.
ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ಗಳಲ್ಲಿ ಅಶ್ವಿನ್ ತಲಾ ಮೂರು ವಿಕೆಟ್ ಪಡೆದರು.
ಮೊದಲ ಇನ್ನಿಂಗ್ಸ್ನಲ್ಲಿ 38 ರನ್ ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ 32 ರನ್ ಗಳಿಸಿದ್ದರು. ಮುಂಬೈನಲ್ಲಿ ನಡೆದ ಎರಡನೇ ಟೆಸ್ಟ್ನ ಎರಡೂ ಇನ್ನಿಂಗ್ಸ್ಗಳಲ್ಲಿ ಅಶ್ವಿನ್ ತಲಾ ನಾಲ್ಕು ವಿಕೆಟ್ ಪಡೆದರು.
ರವೀಂದ್ರ ಜಡೇಜಾ ಎರಡು ಸ್ಥಾನ ಕಳೆದುಕೊಂಡಿದ್ದಾರೆ. ಈ ಹಿಂದೆ ಅವರು ಎರಡನೇ ಸ್ಥಾನದಲ್ಲಿದ್ದರು. ಜಡೇಜಾ ಈಗ 346 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಜಾರಿದ್ದಾರೆ.
ಜಡೇಜಾ ಗಾಯದ ಕಾರಣದಿಂದ ಎರಡನೇ ಟೆಸ್ಟ್ನಲ್ಲಿ ಆಡಿರಲಿಲ್ಲ. ವೆಸ್ಟ್ ಇಂಡೀಸ್ನ ಜೇಸನ್ ಹೋಲ್ಡರ್ ಮೊದಲ ಸ್ಥಾನದಲ್ಲಿದ್ದಾರೆ.