ಮಗಳ ತಿಥಿಗೆ ಬಂದು ತಂದೆ ಆತ್ಮಹತ್ಯೆ hassan saaksha tv
ಹಾಸನ : ಮಗಳ ತಿಂಗಳ ತಿಥಿ ಮಾಡಲು ಬಂದಿದ್ದ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ. 55 ವರ್ಷದ ದೊಡ್ಡಗದ್ದವಳ್ಳಿ ಗ್ರಾಮದ ನಾಗರಾಜ್ ಮೃತ ವ್ಯಕ್ತಿಯಾಗಿದ್ದಾನೆ.
ಅಕ್ಟೋಬರ್ 30 ರಂದು ನಾಗರಾಜ್ ಅವರ ಮಗಳು ಹೇಮಾಶ್ರೀ ಸಾವನ್ನಪ್ಪಿದ್ದರು. ಹೀಗಾಗಿ ಇಂದು ತಿಂಗಳ ತಿಥಿ ಕಾರ್ಯ ಮಾಡಲು ನಾಗರಾಜ್ ಮಾಳೆಗೆರೆಗೆ ಬಂದಿದ್ದರು. ಈ ವೇಳೆ ಮೃತ ಹೇಮಾಳ ಗಂಡನ ಮನೆಗೆ ಬೀಗ ಹಾಕಲಾಗಿತ್ತು. ಇದರಿಂದ ಬೆಳಿಗ್ಗೆಯಿಂದ ಅವರಿಗಾಗಿ ಕಾದು ಕುಳಿತ್ತಿದ್ದ ನಾಗರಾಜ್, ನಂತರ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನು ವಿಡಿಯೋದಲ್ಲಿ ನನ್ನ ಮಗಳ ಸಾವಿಗೆ ಪತಿ ಪ್ರವೀಣ್, ಅತ್ತೆ ಭದ್ರಮ್ಮ ಆಂದಲೆ ಸೋಮಣ್ಣ ಕಾರಣ ಎಂದು ಆರೋಪಿಸಿದ್ದಾರೆ. ನನಗೆ, ನನ್ನ ಮಗಳಿಗೆ ಆದ ಪರಿಸ್ಥಿತಿ ಇನ್ಯಾರಿಗೂ ಆಗಬಾರದು. ಸಾಯುವವರೆಗೂ ಅವರನ್ನು ಜೈಲಿಗೆ ಹಾಕಿ ಎಂದು ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆಅರೇಹಳ್ಳಿ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.