ಬೈಕ್ ಗೆ ಪಿಕಪ್ ವಾಹನ ಡಿಕ್ಕಿ : ಇಬ್ಬರು ಸಾವು chikamagalore saaksha tv
ಚಿಕ್ಕಮಗಳೂರು : ಬೈಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಬೈಕ್ ಸವಾರರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ದೇವರಹಳ್ಳಿ ಗೇಟ್ ಬಳಿ ನಡೆದಿದೆ. ತಿಪಟೂರಿನ ರಾಮು (28) ಹಾಗೂ ನವೀನ್ (25) ಮೃತ ದುರ್ದೈವಿಗಳಾಗಿದ್ದಾರೆ.
ಇವರು ಕೆಲಸ ಮುಗಿಸಿಕೊಂಡು ಚಿಕ್ಕಮಗಳೂರಿನಿಂದ ವಾಪಸ್ ಆಗುವಾಗ ದೇವರಹಳ್ಳಿ ಗೇಟ್ ಬಳಿ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರಾಮು, ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೋರ್ವ ವ್ಯಕ್ತಿ ಅಭಿಷೇಕ್ ತೀವ್ರಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









