ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಪುಡಿರೌಡಿಗಳ ಹಾವಳಿ Kamakshi Palya saaksha tv
ಬೆಂಗಳೂರು : ನಗರದ ಕಾಮಾಕ್ಷಿ ಪಾಳ್ಯದಲ್ಲಿ ಪುಡಿರೌಡಿಗಳ ಹಾವಳಿ ಹೆಚ್ಚಾಗಿದೆ. ಮನೆ ಮುಂದೆ ಹಾಗೂ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ಪುಡಿಗಟ್ಟಿದ್ದಾರೆ.
ದೊಣ್ಣೆ ಮತ್ತು ಲಾಂಗ್ ನಿಂದ ಕಾರುಗಳ ಮೇಲೆ ಅಟ್ಯಾಕ್ ಮಾಡಿ, ವಿಕೃತಿ ಮೆರೆದಿದ್ದಾರೆ. ನಿನ್ನೆ ರಾತ್ರಿ ಆರು ವಾಹನಗಳ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ.
ಇದರಿಂದ ಸ್ಥಳೀಯರು ತೀವ್ರ ಆತಂಕಕ್ಕೆ ಗುರಿಯಾಗಿದ್ಧಾರೆ. ಅಲ್ಲದೇ ಸೂಕ್ತ ಭದ್ರತೆ ನೀಡುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಇನ್ನು ಸ್ಥಳೀಯರ ದೂರಿನ ಮೇಲೆ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಶುರು ಮಾಡಿದ್ದಾರೆ.









