ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಗಡಿನಾಡಲ್ಲಿ ಪ್ರತಿಭಟನೆ MES saaksha tv
ಚಾಮರಾಜನಗರ : ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟ ಎಂಇಎಸ್ ಕಾರ್ಯಕರ್ತರನ್ನು ಬಂಧಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪೊರಕೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ನಗರದ ಶ್ರೀ ಚಾಮರಾಜೇಶ್ಚರಸ್ವಾಮಿ ದೇಗುಲದ ಎದುರು ಜಮಾಯಿಸಿದ ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರು, ಎಂಇಎಸ್ ಪುಂಡರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತ ತಲುಪಿ ಕೆಲ ಕಾಲ ಹೆದ್ದಾರಿ ಸಂಚಾರ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕನ್ನಡ ಧ್ವಜವನ್ನು ಸುಟ್ಟಿರುವ ಎಂಇಎಸ್ ಪುಂಡರನ್ನು ಬಂಧಿಸಬೇಕು. ರಾಜ್ಯದ ಮುಖ್ಯಮಂತ್ರಿ ಅವರು ಕೂಡಲೇ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು, ಎಂಇಎಸ್ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು. ರಾಜ್ಯ ಸರ್ಕಾರ ರಚನೆ ಮಾಡಿರುವ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಜಾಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.









