ಮೇಕೆದಾಟು ಯೋಜನೆ | ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ Congress saaksha tv
ಮೈಸೂರು : ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಜನವರಿ 9 ರಿಂದ ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸಲಿದೆ.
ಈ ಬಗ್ಗೆ ಮೈಸೂರಿನಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ವಿ.ಆರ್.ಸುದರ್ಶನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಪಕ್ಷಗಳು ಹಾಗೂ ಸಂಘ ಸಂಸ್ಥೆಗಳು ಕಾವೇರಿ ನದಿ ನೀರಾವರಿ ವಿಚಾರದಲ್ಲೂ ನಿರಂತರ ಹೋರಾಟ ನಡೆಸುತ್ತಿವೆ.
ಪಕ್ಷಾತೀತವಾಗಿ ಈ ಪಾದಯಾತ್ರೆ ಮಾಡುತ್ತಿದ್ದೇವೆ. ಮೇಕೆದಾಟು ಯೋಜನೆ ಅಭಿವೃದ್ಧಿ ಕಾಂಗ್ರೆಸ್ ನ ಚುನಾವಣಾ ಘೋಷಣೆ ಆಗಿತ್ತು.
ಈ ಯೋಜನೆಯ ವಿಚಾರದಲ್ಲಿ ರಾಜ್ಯ ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಯೋಜನೆ ಜಾರಿಗೊಳಿಸಲು ಸರ್ಕಾರ ಯಾಕೆ ತಡ ಮಾಡುತ್ತಿದೆ ಎಂದು ಪ್ರಶ್ನಿಸಿದರು.
ಇನ್ನು ಬೆಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದು, ಈ ಯೋಜನೆಯಿಂದ ಮೈಸೂರು ಬೆಂಗಳೂರು ನಗರಗಳಿಗೆ ಉಪಯೋಗವಾಗಲಿದೆ.
ಪಾದಯಾತ್ರೆಯನ್ನ ಪಕ್ಷಾತೀತವಾಗಿ ಹಮ್ಮಿಕೊಳ್ಳಲಾಗಿದೆ. ಸಮಾಜದ ಎಲ್ಲ ವರ್ಗದ ಗಣ್ಯರನ್ನ ಆಹ್ವಾನಿಸಲಾಗಿದೆ.
ಜನವರಿ 9ರಂದು ಪಾದಯಾತ್ರೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು.
ತಲಕಾವೇರಿಯಲ್ಲಿ ಜನವರಿ 24 ರಂದು ಕೆಪಿಸಿಸಿ ಅಧ್ಯಕ್ಷರು ಪೂಜೆ ಸಲ್ಲಿಸಲಿದ್ದಾರೆ.
ಪಕ್ಷದ ಸಿಎಲ್.ಪಿ ನಾಯಕರು, ಹಾಗೂ ಇತರೆ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಈ ಯೋಜನೆಯು ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗೂ ಸಹಕಾರಿಯಾಗಲಿದೆ.
ಈ ಯೋಜನೆಯನ್ನ ವಿಳಂಬ ಮಾಡಬಾರದು ಎಂದು ಒತ್ತಾಯಿಸಿದರು.









