ಬೆಳಗಾವಿಯಲ್ಲಿ ಲಾರಿಗೆ ಕಾರು ಡಿಕ್ಕಿ : ಮೂವರು ಸಾವು belagavi saaksha tv
ಬೆಳಗಾವಿ : ಲಾರಿಗೆ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ಸಂಭವಿಸಿದ್ದು, 40 ವರ್ಷದ ವಾಸೀಂ ಖಾನ್, 65 ಸಯ್ಯದ್ ಇಸ್ಮಾಯಿಲ್, 60 ಸುಶೀಲಾ ಫರ್ನಾಂಡಿಸ್ ಮೃತ ದುರ್ದೈವಿಗಳಾಗಿದ್ದಾರೆ.
ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಡಿಸಿಪಿ ಡಾ.ವಿಕ್ರಮ್ ಆಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









