ಶ್ರೀಕಾರಿಂಜೇಶ್ವರ ದೇಗುಲ ಸುತ್ತ ಗಣಿಗಾರಿಕೆ ನಿಲ್ಲಿಸುವಂತೆ ಬೃಹತ್ ಪ್ರತಿಭಟನೆ Srikarnigeshwara saaksha tv
ಮಂಗಳೂರು : ಶ್ರೀಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಮಂಗಳೂರಿನ ತಾಲೂಕು ಕಚೇರಿ ಮುಂಭಾಗ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇಗುಲದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ.
ಹೀಗೆ ಹಲವು ವರ್ಷಗಳಿಂದ ನಡೆಯುತ್ತಿರುವ ಗಣಿಗಾರಿಕೆಯಿಂದ ದೇವಸ್ಥಾನಕ್ಕೆ ಹಾನಿಯಾಗಿದೆ.
ಗಣಿಗಾರಿಕೆ ನಿಲ್ಲಿಸಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಹಿಂದುಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಅಲ್ಲದೇ ಗಣಿಗಾರಿಕೆ ನಿಲ್ಲಿಸಲು ಮತ್ತೆ ಐದು ದಿನಗಳ ಗಡುವು ನೀಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಸ್ವಾಮೀಜಿಗಳು, ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.









