ಎಂಇಎಸ್ ಸಂಘಟನೆ ನಿಷೇಧಿಸುವಂತೆ ದಾವಣಗೆರೆಯಲ್ಲಿ ಪ್ರತಿಭಟನೆ Davanagere saaksha tv
ದಾವಣಗೆರೆ : ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಮತ್ತು ಹೊಂಡದ ವೃತ್ತದಲ್ಲಿ ಮದಕರಿ ನಾಯಕ ಮೂರ್ತಿಗೆ ಮತ್ತು ದುರ್ಗಾಬಿಂಕಾ ವೃತ್ತದಲ್ಲಿ ಶಿವಾಜಿ ಮಹಾರಾಜ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ನಡೆಸಲಾಗಿದೆ.
ಕುರುಬ ಸಮಾಜ ಮತ್ತು ಮರಾಠ ಸಮಾಜ ಹಾಗೂ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮಹಾನ್ ನಾಯಕರ ಮೂರ್ತಿಗಳನ್ನು ವಿರೂಪಗೊಳಿಸಿದ ಕಿಡಿಗೆಡಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ಕೊಡಿಸಬೇಕೆಂದು ಒತ್ತಾಯಿಸಿದರು.









