ಕಾಂಗ್ರೆಸ್ ಪಾದಯಾತ್ರೆಯಲ್ಲಿ ನಿರ್ಮಲಾನಂದನಾಥ ಶ್ರೀಗಳು ಭಾಗಿಯಾಗ್ತಾರೆ : ಡಿ.ಕೆ.ಶಿವಕುಮಾರ್ DK Shivakumar saaksha tv
ಮಂಡ್ಯ : ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳು ಭಾಗಿಯಾಗುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಇಂದು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸಲಿರುವ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು.
ಈ ವೇಳೆ ಡಿ.ಕೆ.ಶಿವಕುಮಾರ್ ಗೆ ಮಾಜಿ ಸಚಿವ ಚಲುವರಾಯಸ್ವಾಮಿ ಹಾಗೂ ಎಂಎಲ್ಸಿ ದಿನೇಶ್ ಗೂಳಿಗೌಡ ಸಾಥ್ ನೀಡಿದ್ದರು.
ನಿರ್ಮಲಾನಂದನಾಥ ಶ್ರೀ ಭೇಟಿ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಜನವರಿ 9ರಂದು ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗಿಯಾಗುತ್ತಾರೆ.
ಸಂತೋಷದಿಂದಲೇ ಕಾರ್ಯಕ್ರಮಕ್ಕೆ ಬರಲು ಶ್ರೀಗಳು ಒಪ್ಪಿಕೊಂಡಿದ್ದಾರೆ. ಎಲ್ಲ ಧರ್ಮದ ಪೀಠಗಳ ಮುಖಂಡರಿಗೂ ಆಹ್ವಾನ ಮಾಡುತ್ತೇವೆ. ಎಲ್ಲ ಸಂಘಟನೆಗಳ ಮುಖ್ಯಸ್ಥರಿಗೂ ಆಹ್ವಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.









