ಹಾಸನ | ಶಿವಸೇನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಪ್ರತಿಭಟನೆ Shiv Sena saaksha tv
ಹಾಸನ : ಎಂ.ಇ.ಎಸ್. ಹಾಗೂ ಶಿವಸೇನೆ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಹಾಸನದಲ್ಲಿ ಕರವೇ ಪ್ರತಿಭಟನೆ ನಡೆಸಿದೆ.
ಟಿ.ಎ.ನಾರಾಯಣಗೌಡ ಬಣದ ಕರವೇ ಕಾರ್ಯಕರ್ತರಿಂದ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಕರವೇ ಕಾರ್ಯಕರ್ತರು ಹಾಸನದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಅಲ್ಲದೇ ಕೂಡಲೇ ಎಂ.ಇ.ಎಸ್. ಹಾಗೂ ಶಿವಸೇನೆ ಸಂಘಟನೆ ನಿಷೇಧಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು.
ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.









